ಹಾವೇರಿ: ತೋಟಗಾರಿಕೆತರಬೇತಿಗೆ ಅರ್ಜಿ ಆಹ್ವಾನ
ಹಾವೇರಿ: ಪ್ರಸಕ್ತ ಸಾಲಿನಲ್ಲಿ ಗದಗಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿ ನೀಡಲು ಜಿಲ್ಲೆಯ 14 ಸಾಮಾನ್ಯ ಹಾಗೂ ಮೂರು ಜನ ಪರಿಶಿಷ್ಟ ಜಾತಿಯ ರೈತರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಕನ್ನಡ ವಿಷಯದೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಅಭ್ಯರ್ಥಿಯ ತಂದೆ, ತಾಯಿ ಹಾಗೂ ಪೋಷಕರು ಕಡ್ಡಾಯವಾಗಿ ಜಮೀನು ಹೊಂದಿರಬೇಕು ಮತ್ತು ಸ್ವಂತ ಸಾಗುವಳಿ ಮಾಡಿರುವ ಬಗ್ಗೆ ಪಹಣಿ ಪತ್ರವನ್ನು ಕಡ್ಡಾಯವಾಗಿ ನೀಡಬೇಕು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ 18 ವರ್ಷದಿಂದ 33 ಹಾಗೂ ಸಾಮಾನ್ಯ ಅಭ್ಯರ್ಥಿಗಳಿಗೆ 18ರಿಂದ 30 ವರ್ಷದೊಳಗಿರಬೇಕು. ಅರ್ಜಿ ಶುಲ್ಕ ಸಾಮಾನ್ಯ ಅಭ್ಯರ್ಥಿಗಳಿಗೆ 10 ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ರು. 5 ಗಳನ್ನು ನಿಗದಿಪಡಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ನಮೂನೆಗಳನ್ನು ಇದೇ ಮೇ 14ರಿಂದ 25ರ ವರೆಗೆ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾವ), ತೋಟಗಾರಿಕೆ ಉಪನಿರ್ದೇಶಕರು(ಜಿಪಂ) ಹಾವೇರಿ ಅವರ ಕಚೇರಿ ವೇಳೆಯಲ್ಲಿ ಪಡೆಯಬಹುದೆಂದು ಹಾವೇರಿ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯ ವಲಯ) ತಿಳಿಸಿದ್ದಾರೆ. ಅಭ್ಯರ್ಥಿಗಳಿಗೆ ಮೇ 28ರಂದು ಬೆಳಗ್ಗೆ 11ಕ್ಕೆ ಸಹಾಯಕ ತೋಟಗಾರಿಕೆ ನಿರ್ದೇಶಕರ ಕಚೇರಿ(ರಾಜ್ಯ ವಲಯ) ಹಾವೇರಿ, ತೋಟಗಾರಿಕೆ ಉಪನಿರ್ದೇಶಕರ ಕಚೇರಿ, ಜಿಲ್ಲಾಡಳಿತ ಭವನ ದೇವಗಿರಿ, ಹಾವೇರಿಯಲ್ಲಿ ಸಂದರ್ಶನ ನಡೆಸಲಾಗುವುದು.ಆಯ್ಕೆ ಪಟ್ಟಿಯನ್ನು ಮೇ 29ರಂದು ಪ್ರಕಟಿಸಲಾಗುವುದು ಹಾಗೂ ಮೇ 10ರಂದು ಆಯ್ಕೆಯಾದ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ನಿರ್ದೇಶನಾಲಯಕ್ಕೆ ಕಳುಹಿಸಲಾಗುವುದು ಹಾಗೂ ದಿನಂಕ ಜೂನ್ 1ರಿಂದ ಅಭ್ಯರ್ಥಿಗಳು ತರಬೇತಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಹಾಯಕ ತೋಟಗಾರಿಕೆ ನಿರ್ದೇಶಕರು(ರಾಜ್ಯ ವಲಯ) ಹಾವೇರಿ ಹಾಗೂ ಆಯಾ ತಾಲೂಕು ಮಟ್ಟದ ತೋಟಗಾರಿಕೆ ಅಧಿಕಾರಿಗಳನ್ನು ಸಂಪರ್ಕಿಸಬಹುದು.