ನಾಳೆಬಸವೇಶ್ವರ ಜಯಂತಿ
ಹಾವೇರಿ: ಜಿಲ್ಲಾಡಳಿತ, ಕನ್ನಡ-ಸಂಸ್ಕೃತಿ ಇಲಾಖೆ, ನಗರಸಭೆ, ಹಾವೇರಿ ಬಸವಾಭಿಮಾನಿಗಳ ಒಕ್ಕೂಟಗಳ ಆಶ್ರಯದಲ್ಲಿ ಜಗಜ್ಯೋತಿ ಬಸವೇಶ್ವರರ ಜಯಂತಿ ಆಚರಣೆ ಹಾಗೂ ಶತಮಾನೋತ್ಸವ ಮೇ 12 ಹಾಗೂ 13ರಂದು ಹಾವೇರಿಯಲ್ಲಿ ಜರುಗಲಿದೆ. ಮೇ 12ರಂದು ಭಾನುವಾರ ಸಂಜೆ 6ಕ್ಕೆ ನಗರದ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಜರುಗುವ ಕಾರ್ಯಕ್ರಮದ ಸಾನ್ನಿಧ್ಯವನ್ನು ಹುಕ್ಕೇರಿಮಠದ ಸದಾಶಿವ ಮಹಾಸ್ವಾಮಿಗಳು ಹಾಗೂ ಹೊಸಮಠದ ಬಸವ ಶಾಂತಲಿಂಗ ಮಹಾಸ್ವಾಮಿಗಳು ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ಶಿವಕುಮಾರ ಉದಾಸಿ ಹಾಗೂ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ ಹಾಗೂ ಸೋಮಣ್ಣ ಬೇವಿನಮರದ ಮತ್ತು ಜಿಪಂ ಅಧ್ಯಕ್ಷ ಶಂಕ್ರಣ್ಣ ಮಾತನವರ ಪಾಲ್ಗೊಳ್ಳುವರು. ಬಸವ ಮಾರ್ಗ ಪ್ರತಿಷ್ಠಾನದ ಅಧ್ಯಕ್ಷ ವಿಶ್ವಾರಾಧ್ಯ ಲಿಂಗಣ್ಣ ಸತ್ಯಂಪೇಟೆ ಉಪನ್ಯಾಸ ನೀಡಲಿದ್ದು, ವಾಣಿ ಸುರೇಶ ಕಣೇಕಲ್ ವಚನ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಮೇ 13ರಂದು ಬೆಳಗ್ಗೆ 9ಕ್ಕೆ ನಗರದ ಬಸವೇಶ್ವರ ವೃತ್ತದಲ್ಲಿರುವ ಬಸವೇಶ್ವರರ ಮೂರ್ತಿಗೆ ಮಾಲಾರ್ಪಣೆ ಮಾಡಲಾಗುವುದು ಎಂದು ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ ತಿಳಿಸಿದ್ದಾರೆ.