ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಬಸವ ಜಯಂತಿ: ನಾಳೆ ಸಾಮೂಹಿಕ ವಿವಾಹ

Vishwanath S
Updated On : 12 May 2013, 11:00 am

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮೇ 11
ತಾಲೂಕಿನ ಬಿಸಲಹಳ್ಳಿ ಗ್ರಾಮದ ಹೊಳಿ ಬಸವೇಶ್ವರ ಸೇವಾ ಸಮಿತಿಯು ಬಸವ ಜಯಂತಿ ಅಂಗವಾಗಿ ಮೇ 13 ರಂದು 5ನೇ ವರ್ಷದ ಸರ್ವಧರ್ಮದವರ ಉಚಿತ ಸಾಮೂಹಿಕ ವಿವಾಹ ಹಾಗೂ ಜಗಜ್ಯೋತಿ ಬಸವೇಶ್ವರರ ಭಾವಚಿತ್ರದ ಮೆರವಣಿಗೆ ಆಯೋಜಿಸಿದೆ.
ಹರಿಹರದ ಪಂಚಮಸಾಲಿ ಪೀಠದ ಪೀಠಾಧ್ಯಕ್ಷರಾದ ಸಿದ್ಧಲಿಂಗ ಮಹಾಸ್ವಾಮಿಗಳು ಕಾರ್ಯಕ್ರಮದ ಸಾನ್ನಿಧ್ಯ ವಹಿಸಲಿದ್ದಾರೆ. ಸಂಜೆ 4ಕ್ಕೆ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ವಿವಾಹದಲ್ಲಿ ಪಾಲ್ಗೊಳ್ಳುವ ನೂತನ ವಧು-ವರರು ಮೊದಲ ಮದುವೆ ಎನ್ನುವ ಕುರಿತು ಗ್ರಾಪಂ ಕಾರ್ಯದರ್ಶಿ ಅಥವಾ ಗ್ರಾಮ ಲೆಕ್ಕಾಧಿಕಾರಿಗಳಿಂದ ಪಡೆದ ಪ್ರಮಾಣ ಪತ್ರದೊಂದಿಗೆ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ. 9972440185, 7259334200 ಇವರನ್ನು ಸಂಪರ್ಕಿಸುವಂತೆ ಜಾತ್ರಾ ಸಮಿತಿ ಅಧ್ಯಕ್ಷ ಶೇಖರಗೌಡ್ರ ಪಾಟೀಲ ಕೋರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement