ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಎಸ್ಸೆಸ್ಸೆಲ್ಸಿ ಪರೀಕ್ಷೆ: ಹಿರೇಕೆರೂರಿಗೆ 2ನೇ ಸ್ಥಾನ

Vishwanath S
Updated On : 13 May 2013, 11:13 am

ಕನ್ನಡಪ್ರಭ ವಾರ್ತೆ, ಹಿರೇಕೆರೂರು, ಮೇ 12
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಜಿಲ್ಲೆಯಲ್ಲಿ ಹಿರೇಕೆರೂರು ತಾಲೂಕಿಗೆ ಎರಡನೇ ಸ್ಥಾನ ದೊರಕಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎಂ.ಸಿ. ಆನಂದ ತಿಳಿಸಿದರು.
ಪಟ್ಟಣದ ಗುರು ಭವನದಲ್ಲಿ ಏರ್ಪಡಿಸಿದ್ದ ಅನುದಾನ ರಹಿತ, ಅನುದಾನ ಹಾಗೂ ಸರ್ಕಾರಿ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರ ಹಾಗೂ ಸಹ ಶಿಕ್ಷಕರ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.
2013ರ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ತಾಲೂಕಿಗೆ ಶೇ. 87.97ರಷ್ಟು ಫಲಿತಾಂಶ ಲಭಿಸಿದೆ. ಈ ಫಲಿತಾಂಶಕ್ಕೆ ಶ್ರಮಿಸಿದ ಎಲ್ಲ ಶಿಕ್ಷಕರಿಗೆ ಅಭಿನಂದನೆಗಳನ್ನು ಇದೇ ಸಂದರ್ಭ ತಿಳಿಸಿದರು. ಮುಂದಿನ ದಿನಗಳಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ಶಿಕ್ಷಣ ಕ್ರಾಂತಿ ಉಂಟು ಮಾಡಲು ವಿಶೇಷ ಕಾರ್ಯಕ್ರಮಗಳನ್ನು ಹಾಕಿಕೊಳ್ಳಲಾಗಿದೆ ಎಂದರು. ಪಾಲಕರು ಹಾಗೂ ತಂದೆ, ತಾಯಿಗಳು ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲಾ ಕೇಂದ್ರಗಳಿಗೆ ಕಳಿಸಬೇಕು. ಅವರಿಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ನೆರವಾಗಬೇಕು ಎಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಸಮನ್ವಯಾಧಿಕಾರಿ ಎನ್. ಸುರೇಶಕುಮಾರ, ತಾಲೂಕು ದೈಹಿಕ ಶಿಕ್ಷಣಾಧಿಕಾರಿ ಪಿ.ಬಿ. ನಿಂಗನಗೌಡ್ರ, ಜಿಲ್ಲಾ ಸೆಕೆಂಡರಿ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ಡಿ. ದಿವಿಗೀಹಳ್ಳಿ, ತಾಲೂಕು ಸೆಕೆಂಡರಿ ಶಿಕ್ಷಕರ ಸಂಘದ ಅಧ್ಯಕ್ಷ ಆರ್.ಎಸ್. ದೊಡ್ಡಮನಿ, ತಾಲೂಕು ಮುಖ್ಯೋಪಾಧ್ಯಾಯರ ಶಿಕ್ಷಕ ಸಂಘದ ಅಧ್ಯಕ್ಷೆ ಸುಜಾತಾ, ಆರ್.ಕೆ. ಲಮಾಣಿ ಮೊದಲಾದವರು ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement