ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ಹಾನಗಲ್ಲ: ಹಾನಗಲ್ಲ ತಾಲೂಕಿನ ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಿಗೆ 2013-14ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಹಾನಗಲ್ಲಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯ, ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ವಸತಿ ನಿಲಯ, ಆಡೂರಿನ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾಥ್ಗಿ ನಿಲಯ ಹಾಗೂ ಶ್ಯಾಡಗುಪ್ಪಿಯ ಸರ್ಕಾರಿ ಮೆಟ್ರಿಕ್ ಪೂಛ್ಗಿ ಬಾಲಕರ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಳಗಳನ್ನು ತುಂಬಲು ಅರ್ಜಿ ಆಹ್ವಾನಿಸಲಾಗಿದೆ. ಇದರಲ್ಲಿ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಶೇ. 75ರಷ್ಟು, ಇತರೆ ಹಿಂದುಳಿದ ವಿದ್ಯಾರ್ಥಿಗಳಿಗೆ ಶೇ. 25ರಷ್ಟು ಸ್ಥಾನಗಳನ್ನು ಮೀಸಲಿರಿಸಲಾಗಿದೆ. ಅಂಗವಿಕಲ ಮಕ್ಕಳಿಗೆ ಶೇ. 3ರಷ್ಟು ಸ್ಥಾನಗಳನ್ನು ಕಾಯ್ದಿರಿಸಲಾಗುವುದು. 5ರಿಂದ 10ನೇ ವರ್ಗದಲ್ಲಿ ಕಲಿಯುತ್ತಿರುವ ಅರ್ಹ ವಿದ್ಯಾರ್ಥಿಗಳು ನಿಗದಿತ ನಮೂನೆಯಲ್ಲಿ ಅವಶ್ಯ ದಾಖಲೆಗಳೊಂದಿಗೆ ತಾಲೂಕು ಪಂಚಾಯಿತಿ ಆವರಣದಲ್ಲಿರುವ ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಾರ್ಯಾಲಯದಲ್ಲಿ ಜೂನ 20ರೊಳಗೆ ಅರ್ಜಿ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.