ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಉಚಿತ ಹೊಲಿಗೆ ತರಬೇತಿಗೆ ಅರ್ಜಿ ಆಹ್ವಾನ

Mainashree
Updated On : 18 May 2013, 10:57 am

ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಮೇ 17
ತಾಲೂಕು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ನಡೆಯುತ್ತಿರುವ ಮಹಿಳಾ ಹೊಲಿಗೆ ತರಬೇತಿ ಕೇಂದ್ರದಲ್ಲಿ 2013-14ನೇ ಸಾಲಿನ ಒಂದು ವರ್ಷದ ಅವಧಿಗೆ ಉಚಿತವಾಗಿ ತರಬೇತಿ ಪಡೆಯಲಿಚ್ಛಿಸುವ ವಿದ್ಯಾವಂತ ನಿರೋದ್ಯೋಗಿ ಹಾಗೂ ವಿಧವಾ ಮಹಿಳೆಯರಿಂದ ಹೊಲಿಗೆ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ 1, 2ಎ, 2ಬಿ, 3ಎ, 3ಬಿ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಒಟ್ಟು 20 ಅಭ್ಯರ್ಥಿಗಳ ಆಯ್ಕೆಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲಿಚ್ಛಿಸುವ ಅಭ್ಯರ್ಥಿಗಳಲ್ಲಿ ಪ್ರ-ವರ್ಗ 1ಕ್ಕೆ ಸೇರಿದವರನ್ನು ಹೊರತುಪಡಿಸಿ ಉಳಿದೆಲ್ಲ ವರ್ಗಕ್ಕೆ ಸೇರಿದವರು ರು. 44,500 ಆದಾಯ ಮೀರಿರಬಾರದು. 18ರಿಂದ 35 ವರ್ಷದೊಳಗಿನವರಿರಬೇಕು, ಕನಿಷ್ಠ 7ನೇ ತರಗತಿವರೆಗೆ ಅಭ್ಯಾಸ ಮಾಡಿರಬೇಕು.
ತರಬೇತಿಗೆ ಆಯ್ಕೆಯಾದವರಿಗೆ ಪ್ರತಿ ತಿಂಗಳು ರು. 300 ಸ್ಟೈಫಂಡ್ ನೀಡಲಾಗುವುದು, ತರಬೇತಿ ಮುಗಿದ ನಂತರ ಇಲಾಖೆಯಿಂದ ನಡೆಸುವ ವಾರ್ಷಿಕ ಪರಿಕ್ಷೆಯಲ್ಲಿ ಪಾಸಾದವರಿಗೆ ಉಚಿತ, ಉತ್ತಮ ಹೊಲಿಗೆ ಯಂತ್ರವನ್ನು ಉಚಿತವಾಗಿ ನೀಡಲಾಗುತ್ತದೆ.
ವಿಧವೆಯರಿಗೆ, ನಿರಾಶ್ರಿತ ಮಹಿಳೆಯರು, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು, ಅರ್ಜಿ ಸಲ್ಲಿಸಲಿಚ್ಛಿಸುವವರು ನಗರದ ಪೋಸ್ಟ ಸರ್ಕಲ್ ಸಮಿಪದಲ್ಲಿರುವ ಬಿಸಿಎಂ ಹಾಸ್ಟೆಲ್‌ನಲ್ಲಿರುವ ತಾಲೂಕು ಹಿಂದುಳಿದ ಹಾಗೂ ಅಲ್ಪಸಂಖ್ಯಾತರ ಕಚೇರಿಯಲ್ಲಿ ಮೇ 31ರ ವರೆಗೆ ಉಚಿತವಾಗಿ ವಿತರಿಸುತ್ತಿರುವ ಅರ್ಜಿಗಳನ್ನು ಸ್ವೀಕರಿಸಿ, ಸಂಬಂಧಿಸಿದ ದಾಖಲೆಗಳನ್ನು ಲಗತ್ತಿಸಿ ಜೂನ್ 5ರೊಳಗಾಗಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕಾರಿಗಳನ್ನು ಸಂಪರ್ಕಿಸಬೇಕೆಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement