ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸಿದ್ದರಾಮಯ್ಯರಿಂದ ಅಭಿವೃದ್ಧಿ ಕಾರ್ಯಗಳಾಗಲಿ: ಬೊಮ್ಮಾಯಿ

Mainashree
Updated On : 18 May 2013, 10:59 am

ಶಿಗ್ಗಾಂವಿ: ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಿದ್ದರಾಮಯ್ಯ ಅವರನ್ನು ಸ್ವಾಗತಿಸಿದ ಮಾಜಿ ಸಚಿವ, ಶಾಸಕ ಬಸವರಾಜ ಬೊಮ್ಮಾಯಿ, ನೂತನ ಸಿಎಂ ಅವರಿಗೆ ರಚನಾತ್ಮಕ ಕೆಲಸಗಳಿಗೆ ವೈಯಕ್ತಿಕವಾಗಿ ಬೆಂಬಲ, ಸಹಕಾರ ನೀಡುತ್ತೇನೆ. ರಾಜ್ಯದ ಪ್ರಗತಿಯಾಗಲಿ, ಅಭಿವೃದ್ಧಿ ನಿರೀಕ್ಷೆಯಿಟ್ಟುಕೊಂಡಿದ್ದೇನೆ ಎಂದರು.
ದೂರವಾಣಿ ಮೂಲಕ ಪತ್ರಿಕೆಯೊಂದಿಗೆ ಮಾತನಾಡಿದ ಬೊಮ್ಮಾಯಿ, ಸಿಎಂ ಸಿದ್ದು ನಮ್ಮ ತಂದೆವರಾದ ದಿ೤ ಎಸ್.ಆರ್. ಬೊಮ್ಮಾಯಿ ಅವರೊಂದಿಗೆ ಕೆಲಸ ಮಾಡಿದ ಅನುಭವವಿದೆ. ಅವರ ಅನುಭವ ರಾಜ್ಯದ ಅಭಿವೃದ್ಧಿಗೆ ಪೂರಕವಾಗಲಿ. ಇಟ್ಟುಕೊಂಡ ಅಭಿವೃದ್ಧಿ ನಿರೀಕ್ಷೆ ಹುಸಿಯಾಗದಿರಲಿ ಎಂದರು.
ಮತದಾರರು ನೀಡಿರುವ 5 ವರ್ಷದ ಅಧಿಕಾರ ಅವಧಿಯಲ್ಲಿ ಕ್ಷೇತ್ರದ ಅಭಿವೃದ್ಧಿಗೆ ಪೂರಕವಾದ ಯೋಜನೆ ಅನುಷ್ಠಾನಗೊಳಿಸಲು ಪ್ರಾಮಾಣಿಕವಾಗಿ ಶ್ರಮಿಸುತ್ತೇನೆ. ಕ್ಷೇತ್ರದ ಪ್ರತಿಯೊಂದು ಗ್ರಾಮದಲ್ಲಿ ಕುಡಿಯವ ನೀರು ಸೇರಿದಂತೆ ಜನರ ಮೂಲಭೂತ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುತ್ತೇನೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement