ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸುದ್ದಿ ಸಂಕ್ಷೇಪ

Mainashree
Updated On : 18 May 2013, 10:59 am

ಹಾಸ್ಟೆಲ್: ಅರ್ಜಿ ಆಹ್ವಾನ
ಹಾವೇರಿ: ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಹಿರೇಕೆರೂರು ತಾಲೂಕಿನಲ್ಲಿ ನಡೆಯುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ಹಾಗೂ ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಹ ವಿದ್ಯಾರ್ಥಿಗಳಿಂದ ಜೂನ್ 10, 2013ರೊಳಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಹಿರೇಕೆರೂರು, ಕೋಡ, ಚಿಕ್ಕೇರೂರು, ಕುಡುಪಲಿ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ, ಹಿರೇಕೆರೂರು ಬಾಲಕಿಯರ ವಿದ್ಯಾರ್ಥಿ ನಿಲಯ ಹಾಗೂ ಹಿರೇಕೆರೂರು ಅಲ್ಪಸಂಖ್ಯಾತರ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ 5ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತರ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿ ನಿಲಯಗಳಿಗೆ ಪ್ರವೇಶ ಪಡೆದ ವಿದ್ಯಾರ್ಥಿಗಳಿಗೆ ಉಚಿತ ಊಟ, ಉಪಹಾರ, ಪಠ್ಯಪುಸ್ತಕ, ಲೇಖನ ಸಾಮಗ್ರಿ, ಹಾಸಿಗೆ ಹಾಗೂ ಸಮವಸ್ತ್ರ, ನೀಡಲಾಗುವುದು. ಅರ್ಜಿಯೊಂದಿಗೆ ತಹಸೀಲ್ದಾರರಿಂದ ಪಡೆದ ಜಾತಿ ಮತ್ತು ಆದಾಯ ಪ್ರಮಾಣಪತ್ರ ಹಾಗೂ 2012-13ನೇ ಸಾಲಿನಲ್ಲಿ ತೇರ್ಗಡೆಯಾದ ಅಂಕಪಟ್ಟಿ ಲಗತ್ತಿಸಬೇಕು. ಆಸಕ್ತ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರು ನಿಗದಿತ ಅರ್ಜಿ ನಮೂನೆಗಳನ್ನು ಹಿರೇಕೆರೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿ ಕಚೇರಿ ವೇಳೆಯಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಹಿರೇಕೆರೂರು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವಿಸ್ತರಣಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದು.
ಗಂಗಿಬಾವಿ: ಅಕ್ರಮ ಕಲ್ಲು ಗಣಿಗಾರಿಕೆ ಮೇಲೆ ದಾಳಿ
ಹಾವೇರಿ: ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಗಂಗಿಬಾವಿ ಸುಕ್ಷೇತ್ರದ ಹತ್ತಿರ ಇರುವ ಹೊಸೂರು ಗ್ರಾಮದ ವ್ಯಾಪ್ತಿಯಲ್ಲಿ ಸುರಗೊಂಡ ಮತ್ತು ಇಂದೂರ ಅವರ ಜಮೀನುಗಳಲ್ಲಿ ಅಕ್ರಮವಾಗಿ ಕಲ್ಲುಗಣಿಗಾರಿಕೆ (ಜಂಬಿಟ್ಟಗಿ) ಬಳಸುತ್ತಿದ್ದ 3 ಪವರ್ ಟ್ರೇಲರ್‌ಗಳನ್ನು(ಕಲ್ಲು ಕೊರೆಯುವ ಯಂತ್ರ) ಶುಕ್ರವಾರ ವಶಪಡಿಸಿಕೊಳ್ಳಲಾಗಿದೆ. ಸದರಿ ಜಮೀನು ಮಾಲೀಕರಾದ ಸುರಗೊಂಡ ಮತ್ತು ಇಂದೂರ ಅವರುಗಳ ಮೇಲೆ ಈಗಾಗಲೇ ಶಿಗ್ಗಾಂವಿ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾರ್ಯಚರಣೆಯ ಮಾಹಿತಿಯನ್ನು ನ್ಯಾಯಾಲಯಕ್ಕೆ ಒದಗಿಸಲಾಗುವುದು ಎಂದು ಹಾವೇರಿಯ ಹಿರಿಯ ಭೂವಿಜ್ಞಾನಿ ಗಣಿ ಮತ್ತು ಭೂ-ವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ದಾಳಿಗೆ ಶಿಗ್ಗಾಂವಿ ತಾಲೂಕಿನ ಉಪ ಅರಕ್ಷಕ ಅಧಿಕ್ಷಕರು ಬಿ.ವೈ. ಬೆಳ್ಳುಬ್ಬಿಯವರು ದಾಳಿಗೆ ಸಹಕಾರ ನೀಡಿದರು. ದಾಳಿ ಸಮಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಭೂ-ವಿಜ್ಞಾನಿಗಳಾದ ಶ್ರೀನಿವಾಸ, ಶಬ್ಬೀರ್ ಅಹಮ್ಮದ್ ದಿಡಗೂರ, ಡ್ರಿಲ್ಲರ್ ಎನ್.ಟಿ. ಹಳ್ಳಕರ್ ಕಂದಾಯ ಇಲಾಖೆ ಕಂದಾಯ ನಿರೀಕ್ಷಕರು ರತ್ನಾಕರ, ಗ್ರಾಮಲೆಕ್ಕಧಿಕಾರಿ ಸೊಂಟಕ್ಕಿ, ಪೊಲಿಸ್ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement