ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹಿರೇಕೆರೂರು: ಶಂಕಿತ ಡೆಂಘೀಗೆ ಬಾಲಕ ಬಲಿ

Vishwanath S
Updated On : 19 May 2013, 11:36 am

ಹಿರೇಕೆರೂರು: ತಾಲೂಕಿನ ಹಿರೇಮೊರಬ ಗ್ರಾಮದಲ್ಲಿ ಬಾಲಕನೊಬ್ಬ ಶಂಕಿತ ಡೆಂಘೀ ಜ್ವರದ ಬಾಧೆಯಿಂದ ಸಾವನ್ನಪ್ಪಿದ್ದಾನೆ. ಗ್ರಾಮದ ಕುಶಾಲಗೌಡ ಅಶೋಕಗೌಡ ಮುದಿಗೌಡರ್ (6) ಸಾವನ್ನಪ್ಪಿದ ದುರ್ದೈವಿ.  ಕೆಲವು ದಿನಗಳ ಹಿಂದೆ ತೀವ್ರ ಜ್ವರದಿಂದ ಬಳಲುತ್ತಿದ್ದ ಕುಶಾಲಗೌಡನನ್ನು ಚಿಕಿತ್ಸೆಗಾಗಿ ದಾವಣಗೆರೆಯ ಎಸ್.ಎಸ್. ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಬಾಲಕ ಶುಕ್ರವಾರ ತಡರಾತ್ರಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಇದರೊಂದಿಗೆ ತಾಲೂಕಿನಲ್ಲಿ ಶಂಕಿತ ಡೆಂಘೀಗೆ ಇಬ್ಬರು ಬಾಲಕರು ಬಲಿಯಾದಂತಾಗಿದೆ. ಮಗನನ್ನು ಕಳೆದುಕೊಂಡ ದಂಪತಿ, ಕುಟುಂಬ ಸದಸ್ಯರ ರೋದನ ಮುಗಿಲು ಮುಟ್ಟಿತ್ತು.  ತಮ್ಮ ಮಗನಿಗೆ ಹಿರೇಕೆರೂರು ಸರ್ಕಾರಿ ಆಸ್ಪತ್ರೆ ವೈದ್ಯರು, ದಾವಣಗೆರೆಯ ಎಸ್.ಎಸ್. ಆಸ್ಪತ್ರೆ ವೈದ್ಯರುಸೂಕ್ತ ಚಿಕಿತ್ಸೆ ನೀಡುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆಂದು ಬಾಲಕನ ಪಾಲಕರು ಆಕ್ರೋಶ ವ್ಯಕ್ತಪಡಿಸಿದರು.

ಅರ್ಜಿ ಆಹ್ವಾನ
ಗದಗ: ಕನ್ನಡ ಪುಸ್ತಕ ಪ್ರಾಧಿಕಾರವು 2010ನೇ ಸಾಲಿನಲ್ಲಿ ಪ್ರಥಮಾವೃತ್ತಿಯಾಗಿ ಮುದ್ರಣಗೊಂಡ ಕನ್ನಡ ಪುಸ್ತಕಗಳನ್ನು ಪ್ರಾಧಿಕಾರದ ಸಗಟು ಖರೀದಿ ಯೋಜನೆಯಡಿ ಖರೀದಿಸಲು ಅರ್ಜಿ ಆಹ್ವಾನಿಸಲಾಗಿದೆ. ಮಾಹಿತಿಗೆ ಆಡಳಿತಾಧಿಕಾರಿಗಳು, ಕನ್ನಡ ಪುಸ್ತಕ ಪ್ರಾಧಿಕಾರ, ಕನ್ನಡ ಭವನ, ಮೊದಲನೇ ಮಹಡಿ, ಜೆ.ಸಿ. ರಸ್ತೆ, ಬೆಂಗಳೂರು-560002, ದೂ. 080-22484516, 22107704 ಸಂಪರ್ಕಿಸಬಹುದು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement