ಕಾಗಿನೆಲೆ: ಇಂದು ಕುರುಬ ಸಮಾಜದ ಪೂರ್ವಭಾವಿ ಸಭೆ
ಹಾವೇರಿ: ರಾಜ್ಯದ ನೂತನ ಮುಂಖ್ಯಮತ್ರಿ ಸಿದ್ದರಾಮಯ್ಯ ಜೂನ್ 2ರಂದು ಕಾಗಿನೆಲೆ ಶ್ರೀ ಕನಕ ಗುರುಪೀಠಕ್ಕೆ ಆಗಮಿಸಿ ನೂತನ ವಸತಿ ನಿಲಯವನ್ನು ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಮೇ 20ರಂದು ಶ್ರೀ ಪೀಠದಲ್ಲಿ ಪೀಠದ ಜಗದ್ಗುರು ಶ್ರೀ ನಿರಂಜನಾನಂದ ಪುರಿ ಸ್ವಾಮೀಜಿ ಸಾನ್ನಿಧ್ಯ ಹಾಗೂ ಕುರುಬರ ಸಂಘದ ಜಿಲ್ಲಾಧ್ಯಕ್ಷ ಚಂದ್ರಶೇಖರ ಮುದಕಣ್ಣನವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಕರೆಯಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಮಾಲತೇಶ ಬಣಕಾರ ತಿಳಿಸಿದ್ದಾರೆ. ಸೋಮವಾರ ಬೆಳಗ್ಗೆ 10.30ಕ್ಕೆ ಜರುಗಲಿರುವ ಈ ಸಭೆಗೆ ಜಿಲ್ಲೆಯ ತಾಲೂಕು ಘಟಕದ ಕುರುಬರ ಸಂಘದ ಅಧ್ಯಕ್ಷರು, ಪದಾಧಿಕಾರಿಗಳು ಆಗಮಿಸಬೇಕೆಂದು ಬಣಕಾರ ಕೋರಿದ್ದಾರೆ.