ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಾಂಗ್ರೆಸ್ ತಾಂತ್ರಿಕ ಗೆಲವು ಸಾಧಿಸಿದೆ: ಬೊಮ್ಮಾಯಿ

Lingaraj Badiger
Updated On : 21 May 2013, 11:24 am

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ಮೇ 20
ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ತಾಂತ್ರಿಕ ಗೆಲವು ಸಾಧಿಸಿದೆ ಎಂದು ಮಾಜಿ ಸಚಿವ, ಶಿಗ್ಗಾಂವಿ ಶಾಸಕ ಬಸವರಾಜ ಬೊಮ್ಮಾಯಿ ಹೇಳಿದರು.
ತಾಲೂಕಿನ ಮೋಟೆಬೆನ್ನೂರಿನ ಬಳ್ಳಾರಿ ರುದ್ರಪ್ಪ ಕಾಲೇಜು ಸಭಾಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.
ಬಿಜೆಪಿ ಮತ್ತು ಕೆಜೆಪಿಗಳ ನಡುವಿನ ಭಿನ್ನಮತದ ಲಾಭ ಕಾಂಗ್ರೆಸ್‌ಗೆ ಆಗಿದೆ. ಬಿಜೆಪಿಯು ವಿಭಿನ್ನ ಪಕ್ಷ ಎಂಬುದನ್ನು ಕಳೆದ 5 ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಕಾರ್ಯಕ್ರಮಗಳಿಂದ ರಾಜ್ಯಕ್ಕೆ ತಿಳಿಸಿಕೊಟ್ಟಿದೆ. ಆದರೆ, ಪಕ್ಷದಲ್ಲಿ ಆಂತರಿಕ ಭಿನ್ನಮತದಿಂದ ಪ್ರಸಕ್ತ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು ಎಂದರು.
ರಾಜ್ಯದ ಮತದಾರರಿಗೆ ನಮ್ಮ ಮೇಲೆ ಸಿಟ್ಟಿದೆಯೇ ಹೊರತು ದ್ವೇಷವಿಲ್ಲ. 4 ಬಾರಿ ಸರ್ಕಾರವನ್ನು ಬೀಳಿಸುವ ಪ್ರಯತ್ನಕ್ಕೆ ನಮ್ಮವರೇ ಮುಂದಾಗಿದ್ದರಿಂದ ರಾಜ್ಯದ ಜನತೆ ನಮ್ಮನ್ನು ತಿರಸ್ಕರಿಸಲು ನಿರ್ಧರಿಸಿದ್ದಾರೆ. ಆಂತರಿಕ ಬಿಕ್ಕಟ್ಟನ್ನು ಪರಿಹರಿಸುವ ನಿಟ್ಟಿನಲ್ಲಿ ವಿಫಲವಾಗಿದ್ದರಿಂದ ಚುನಾವಣೆಯಲ್ಲಿ ಸೋಲನುಭವಿಸಬೇಕಾಯಿತು ಎಂದರು.
ಬದಲಾವಣೆ ಎಂಬುದು ಸಹಜ ಪ್ರಕ್ರಿಯೆ. ಆಡಳಿತ ವಿರೋಧಿ ಅಲೆಯಿಂದಾಗಿ ಕಾಂಗ್ರೆಸ್ ಗೆಲವಿಗೆ ಸಹಕಾರಿಯಾಯಿತು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮವಾಗಿದ್ದು ಜನತೆ ನಮ್ಮನ್ನು ತಿರಸ್ಕರಿಸಿದ್ದಾರೆ. ವಿರೋಧ ಪಕ್ಷವಾಗಿ ನಮ್ಮ ಹೋರಾಟ ಮುಂದುವರೆಸಲಿದ್ದೇವೆ ಎಂದರು. ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದು ಸವಾಲು ಮತ್ತು ಅವಕಾಶವನ್ನು ತುಲನೆ ಮಾಡುವಂತಹ ಕಾಲ ಎದುರಾಗಿದೆ. ಕಾರ್ಯಕರ್ತರು ಪಕ್ಷವನ್ನು ಕಟ್ಟುವ ಕೆಲಸದಲ್ಲಿ ತೊಡಗುವ ಮೂಲಕ ಕೇಂದ್ರದಲ್ಲಿ ಬಿಜೆಪಿಯನ್ನು ಮತ್ತೆ ಅಧಿಕಾರಕ್ಕೆ ತರಬೇಕಾಗಿದೆ ಎಂದರು.
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ, ಬಿಜೆಪಿ ಜಿಲ್ಲಾಧ್ಯಕ್ಷ ಸೋಮಣ್ಣ ಬೇವಿನಮರದ, ವಿರೂಪಾಕ್ಷಪ್ಪ ಬಳ್ಳಾರಿ, ಭಾರತಿ ಜಂಬಗಿ ಇನ್ನಿತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement