ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅರ್ಜಿ ಆಹ್ವಾನ

Rashmi Kasaragodu
Updated On : 22 May 2013, 11:53 am

ರಾಣಿಬೆನ್ನೂರು: ತಾಲೂಕಿನ ಸುಣಕಲ್ಲಬಿದರಿ ಗ್ರಾಮದ ಅರಳಿ ಶಿದ್ಲಿಂಗಪ್ಪ ಬಸಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ 2013-14ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಬಿಎ, ಬಿಕಾಂ, ಬಿಬಿಎ, ಬಿಎಸ್ಸಿ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆರು ವರ್ಷಗಳ ಹಿಂದೆ ಪ್ರಾರಂಭಗೊಂಡಿರುವ ಈ ಕಾಲೇಜಿನಲ್ಲಿ ಓದಿರುವ ಅನೇಕ ವಿದ್ಯಾರ್ಥಿಗಳು ಉನ್ನತ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಬಿಬಿಎ ವಿಷಯದಲ್ಲಿ ಅಧ್ಯಯನ ಮಾಡಿದವರಲ್ಲಿ ಅನೇಕರು ಸ್ವಉದ್ಯೋಗಿಗಳಾಗಿದ್ದಾರೆ. ಹಳ್ಳಿಗಳಲ್ಲಿ ಪದವಿ ಶಿಕ್ಷಣ ನೀಡುವ ಕಾಲೇಜೆಂಬ ಖ್ಯಾತಿಗೆ ಪಾತ್ರವಾದ ಸುಣಕಲ್ಲಬಿದರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶಿಕ್ಷಣ ಪಡೆಯಲು ಗ್ರಾಮಾಂತರ ಮತ್ತು ನಗರ ಪ್ರದೇಶದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.



ದಿನಾಚರಣೆ
ಹಾವೇರಿ: ಜಿಲ್ಲಾಡಳಿತ ಭವನದ ಡಿಸಿ ಸಭಾಂಗಣದಲ್ಲಿ ಮಂಗಳವಾರ ಭಯೋತ್ಪಾದನಾ ವಿರೋಧಿ ದಿನ ಆಚರಿಸಲಾಯಿತು. ಡಿಸಿ ಪಾಂಡುರಂಗ ನಾಯಕ ಅಧ್ಯಕ್ಷತೆ ವಹಿಸಿದ್ದರು. ಜಿಪಂ ಮುಖ್ಯ ಯೋಜನಾಧಿಕಾರಿ ಬಸನಗೌಡ, ಅಪರ ಜಿಲ್ಲಾಧಿಕಾರಿ ಜಿ. ಜಗದೀಶ, ಮಹಾಂತೇಶ ಬೀಳಗಿ, ವಿವಿಧ ಇಲಾಖಾಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments