ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

Lingaraj Badiger
Updated On : 24 May 2013, 11:14 am

ಹಾವೇರಿ: ಜಿಲ್ಲೆಯ ಹಿರೇಕೆರೂರು, ಹಾವೇರಿ, ಶಿಗ್ಗಾಂವಿ ಹಾಗೂ ಸವಣೂರು ತಾಲೂಕುಗಳ ವಿವಿಧ ಗ್ರಾಮಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ನೇಮಕಾತಿ ಕುರಿತು ಮೇ 22ರಂದು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿ ಸಭೆ ಸೇರಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಆಯ್ಕೆ ಪಟ್ಟಿಯನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರ ಕಚೇರಿ, ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ಆಯಾ ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸೂಚನಾ ಫಲಕಗಳಲ್ಲಿ ಪ್ರಕಟಿಸಲಾಗಿದೆ ಎಂದು ಇಲಾಖೆ ಉಪ ನಿರ್ದೇಶಕಿ ಚನ್ನಮ್ಮ ಹೊಳಿಹೊಸೂರು ತಿಳಿಸಿದ್ದಾರೆ.
ಹಾವೇರಿ: ಸ್ವಯಂಸೇವಾಸಂಸ್ಥೆಗಳಿಂದ ಆಹ್ವಾನ
ಹಾವೇರಿ: ಪ್ರಸಕ್ತ ಸಾಲಿನ ಶಾಲೆಯಿಂದ ಹೊರಗುಳಿದ ಮಕ್ಕಳ ಕಾರ್ಯತಂತ್ರದಡಿ ಆರು ತಿಂಗಳ ಋತುಮಾನ ವಸತಿಯುತ ಕೇಂದ್ರ ಪ್ರಾರಂಭಿಸಲು ಸರ್ಕಾರೇತರ ಸ್ವಯಂ ಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ನಮೂನೆಗಳನ್ನು ವೆಬ್‌ಸೈಟ್ ಡಡಛ್ಞಛ್ಠಟಿಛಡಿಛ್ಞಛ.್ಜ್ಟಢ.್ಝಟಿ ಅಥವಾ ಜಿಲ್ಲಾ ಯೋಜನಾ ಉಪ ಸಮನ್ವಯಾಧಿಕಾರಿ, ಸರ್ವ ಶಿಕ್ಷಣ ಅಭಿಯಾನ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾವೇರಿ ಅವರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಜೂ. 3ರೊಳಗೆ ಸಲ್ಲಿಸಬೇಕೆಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಎಸ್.ಬಿ. ಕೊಡ್ಲಿ ತಿಳಿಸಿದ್ದಾರೆ.
ಮಂಡಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ
ಹಿರೇಕೆರೂರು: ತಾಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಹಕಾರಿ ಸಂಘದ ಆಡಳಿತ ಮಂಡಳಿಯ ನೂತನ ಅಧ್ಯಕ್ಷರಾಗಿ ನೆಶ್ವಿ ಗ್ರಾಮದ ಎಚ್‌ಪಿಎಸ್ ಶಾಲೆಯ ಫಕೀರಸಾಬ್ ಹುಸೇನಸಾಬ್ ಕುಡುಪಲಿ ಹಾಗೂ ಉಪಾಧ್ಯಕ್ಷರಾಗಿ ತಾವರಗಿ ಗ್ರಾಮದ ಎಚ್‌ಪಿಎಸ್ ಶಾಲೆಯ ಸುಶೀಲಾ ಕಟ್ಟಿಮನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಗೌರವ ಕಾರ್ಯದರ್ಶಿ ಯು.ಎಚ್. ಬಿದರಿ ತಿಳಿಸಿದ್ದಾರೆ.
ಕನ್ನಪ್ಪ ಹೊಸಮನಿ ನಿಧನ
ಬ್ಯಾಡಗಿ: ಪಟ್ಟಣದ ಬನಶಂಕರಿ ಓಣಿ ನಿವಾಸಿ, ಪ್ರಗತಿಪರ ರೈತ ಕನ್ನಪ್ಪ ಹೊಸಮನಿ ಗುರುವಾರ ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ ಮೂವರು ಪುತ್ರರು, ಮೂವರು ಪುತ್ರಿಯರು, ಅಪಾರ ಬಂಧುಗಳು ಇದ್ದಾರೆ. ಸಂಜೆ ವೀರಶೈವ ಮುಕ್ತಿಧಾಮದಲ್ಲಿ ಅಂತ್ಯಕ್ರಿಯೆ ಜರುಗಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement