ನೂಲಗೇರಿ ಕಾಲೇಜಿಗೆಶೇ. 92.5 ಫಲಿತಾಂಶ
ಹಿರೇಕೆರೂರು: ತಾಲೂಕಿನ ನೂಲಗೇರಿ ಗ್ರಾಮದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ದ್ವಿತೀಯ ಪಿಯುಸಿ ಫಲಿತಾಂಶ ಶೇ. 92.5ರಷ್ಟಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ಒಟ್ಟು 34 ವಿದ್ಯಾರ್ಥಿಗಳ ಪೈಕಿ ಇಬ್ಬರು ವಿದ್ಯಾರ್ಥಿನಿಯರು ಉನ್ನತ, 22 ವಿದ್ಯಾರ್ಥಿಗಳು ಪ್ರಥಮ, ನಾಲ್ವರು ದ್ವಿತೀಯ, ಮೂರು ತೃತೀಯ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ. ಕಲಾ ವಿಭಾಗದಲ್ಲಿ ಸುಧಾರಾಣಿ ನಿಂಗಾಪುರ ಶೇ. 90, ವಾಣಿಜ್ಯ ವಿಭಾಗದಲ್ಲಿ ಚೇತನಾ ಅಂಗಡಿ ಶೇ. 90 ಅಂಕ ಗಳಿಸಿ ಗಳಿಸಿದ್ದಾರೆ. ವಿದ್ಯಾರ್ಥಿಗಳನ್ನು ಕಾಲೇಜು ಅಭಿವೃದ್ಧಿ ಸಮಿತಿ, ಪ್ರಾಚಾರ್ಯರು, ಸಿಬ್ಬಂದಿ ಅಭಿನಂದಿಸಿದ್ದಾರೆ.
ಹಿರೇಕೆರೂರು: ನಾಳೆ ತಾಪಂ ಪ್ರಗತಿ ಪರಿಶೀಲನಾ ಸಭೆ
ಹಾನಗಲ್ಲ: ಹಾನಗಲ್ಲ ತಾಲೂಕು ಪಂಚಾಯತ್ ಪ್ರಗತಿ ಪರಿಶೀಲನಾ ಸಭೆ ಮೇ 25ರಂದು ಶಾಸಕ ಮನೋಹರ ತಹಶೀಲ್ದಾರ ಅವರ ಅಧ್ಯಕ್ಷತೆಯಲ್ಲಿ ಇಲ್ಲಿನ ಸಾಮರ್ಥ್ಯ ಸೌಧದಲ್ಲಿ ನಡೆಯಲಿದೆ. ಶನಿವಾರ ಬೆಳಗ್ಗೆ 10.30 ಗಂಟೆಗೆ ನಡೆಯುವ ಪ್ರಗತಿ ಪರಿಶೀಲನಾ ಸಭೆಯಲ್ಲಿ ತಾಲೂಕು ಪಂಚಾಯಿತಿ ಅಧ್ಯಕ್ಷ ಮಲ್ಲನಗೌಡ ವೀರನಗೌಡ್ರು, ಉಪಾಧ್ಯಕ್ಷೆ ಅನಿತಾ ಶಿವೂರ, ಜಿಪಂ ಹಾಗೂ ತಾಪಂ ಸದಸ್ಯರು ಉಪಸ್ಥಿತರಿರುವರು. ಈ ಸಭೆಗೆ ಎಲ್ಲ ಇಲಾಖೆ ಮುಖ್ಯಸ್ಥರು ಪಾಲ್ಗೊಳ್ಳಬೇಕೆಂದು ತಾಪಂ ಇಓ ಮನೋಜಕುಮಾರ ಗಡಬಳ್ಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.