ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

28ರಂದು ಜಾನಪದ ಕಲಿಕಾ ಕೇಂದ್ರಕ್ಕೆ ಚಾಲನೆ

Vishwanath S
Updated On : 26 May 2013, 1:25 am

ಹಾವೇರಿ: ಮೇ 28ರಂದು ಬೆಳಗ್ಗೆ 10.30ರ ಸುಮಾರಿಗೆ ಜಾನಪದ ಅಧ್ಯಯನ ಕೇಂದ್ರ ಹಾಗೂ ಜನಪದ ಕಲೆಗಳ ಕಲಿಕಾ ಕೇಂದ್ರಗಳು ವಿಧ್ಯುಕ್ತವಾಗಿ ಆರಂಭಗೊಳ್ಳಲಿವೆ. ಸಹಕಾರ ಸಚಿವ ಎಚ್.ಎಸ್. ಮಹಾದೇವಪ್ರಸಾದ್ ಅವರು ಜಾನಪದ ಅಧ್ಯಯನ ಕೇಂದ್ರ ಉದ್ಘಾಟಿಸಲಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರೀ ಅವರು ಜನಪದ ಕಲೆಗಳ ಕಲಿಕಾ ಕೇಂದ್ರಕ್ಕೆ ಚಾಲನೆ ನೀಡಲಿದ್ದಾರೆ. ಚಾಮರಾಜನಗರ ಕ್ಷೇತ್ರ ಸಂಸದ ಧ್ರುವನಾರಾಯಣ, ಹನೂರು ವಿಧಾನಸಭಾ ಕ್ಷೇತ್ರದ ಶಾಸಕ ನರೇಂದ್ರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಧಾರ್ಮಿಕ ದತ್ತಿ ಇಲಾಖೆ ಪ್ರಧಾನ ಕಾರ್ಯದರ್ಶಿ ತುಷಾರ ಗಿರಿನಾಥ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಧಾನ ಕಾರ್ಯದರ್ಶಿ ಬಸವರಾಜ ಉಪಸ್ಥಿತರಿರುವರು. ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಅಂಬಳಿಕೆ ಹಿರಿಯಣ್ಣ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement