ಚರ್ಚೆ, ಪ್ರಬಂಧ ಸ್ಪರ್ಧೆಯಲ್ಲಿ ಪ್ರಥಮ
ಹಾನಗಲ್ಲ: ತಾಲೂಕಿನ ಅಕ್ಕಿಆಲೂರು ಸಿ.ಜಿ. ಬೆಲ್ಲದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಇತ್ತೀಚೆಗೆ ನಡೆಸಿದ 'ಮಠ-ಮಾನ್ಯಗಳಿಗೆ ಸರ್ಕಾರದ ಅನುದಾನ ಸೂಕ್ತವೇ?' ಕುರಿತಾದ ರಾಜ್ಯಮಟ್ಟದ ಚರ್ಚಾ ಸ್ಪರ್ಧೆಯಲ್ಲಿ ವಿಷಯದ ಪರವಾಗಿ ಮಾತನಾಡಿದ ಟಿಪ್ಪುಸುಲ್ತಾನ ನಾಯ್ಕವಾಡಿ ಹಾಗೂ 'ಭ್ರಷ್ಟಾಚಾರದಲ್ಲಿ ಶಿಕ್ಷಣದ ಪಾತ್ರ' ಕುರಿತಾದ ಪ್ರಬಂಧ ಸ್ಪರ್ಧೆಯಲ್ಲಿ ಅಶ್ಪಕ್ ಶೇಖ್ ಪ್ರಥಮ ಸ್ಥಾನ ಗಳಿಸಿದ್ದಾರೆ. ಈ ಇಬ್ಬರೂ ವಿದ್ಯಾರ್ಥಿಗಳು ಹಾನಗಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ವಿದ್ಯಾರ್ಥಿಗಳ ಸಾಧನೆಯನ್ನು ಪ್ರಾಂಶುಪಾಲ ಮಹ್ಮದ ಷರೀಫ್ ಹಾನಗಲ್ ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ವಿದ್ಯಾರ್ಥಿಗಳು ಪ್ರಶಂಶಿಸಿದ್ದಾರೆ.