ನರಗುಂದ: ವಿದ್ಯಾರ್ಥಿ ನಿಲಯಕ್ಕೆ ಅರ್ಜಿ ಆಹ್ವಾನ
ನರಗುಂದ: ನರಗುಂದ ತಾಲೂಕಿನ ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕ, ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ 2013-14ನೇ ಸಾಲಿಗೆ ಅರ್ಜಿ ಆಹ್ವಾನಿಸಲಾಗಿದೆ. ತಾಲೂಕಿನ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ವಿದ್ಯಾರ್ಥಿಗಳು ತಮ್ಮ ಶಾಲಾ ಮೂಲದಾಖಲೆಗಳ ಮೂಲಕ ಅರ್ಜಿ ಸಲ್ಲಿಸಲು ಜೂನ್ 10 ಕೊನೆಯ ದಿನವಾಗಿದ್ದು, ಭರ್ತಿ ಮಾಡಿದ ಅರ್ಜಿ ಫಾರ್ಮ್ ಜತೆಗೆ ಕಳೆದ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಂಕಪಟ್ಟಿ, ತಹಸೀಲ್ದಾರ್‌ರಿಂದ ಪಡದ ಜಾತಿ ಹಾಗೂ ಆದಾಯ ಪ್ರಮಾಣಪತ್ರ ಹಾಗೂ ಅಭ್ಯರ್ಥಿಯ 2 ಪಾಸ್‌ಪೋರ್ಟ್ ಸೈಜಿನ ಭಾವಚಿತ್ರ ಇವುಗಳ ದೃಢೀಕರಿಸಿದ ಪ್ರತಿಗಳನ್ನು ಲಗತ್ತಿಸಿ ತಾಲೂಕು ಹಿಂದುಳಿದ ವರ್ಗಗಳ ವಿಸ್ತರಣಾಧಿಕಾರಿಗಳ ಕಚೇರಿಯಲ್ಲಿ ಅಥವಾ ಸಂಬಂಧಪಟ್ಟ ವಿದ್ಯಾರ್ಥಿ ನಿಲಯಗಳಲ್ಲಿ ಅರ್ಜಿ ಸಲ್ಲಿಸಬೇಕು. ಅಪೂರ್ಣ ಹಾಗೂ ತಡವಾಗಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದೆಂದು ಪ್ರಕಟಣೆ ತಿಳಿಸಿದೆ.