ಶಿಕ್ಷಕರ ಸಂಘಕ್ಕೆ ಅಧ್ಯಕ್ಷ, ಉಪಾಧ್ಯಕ್ಷರಾಗಿ ಬಡಿಗೇರ, ಪಾಟೀಲ್ ಆಯ್ಕೆ
ರಾಣಿಬೆನ್ನೂರು: ತಾಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಹಕಾರಿ ಸಂಘದ ಅಧ್ಯಕ್ಷರಾಗಿ ಚಳಗೇರಿ ಗ್ರಾಮದ ಪ್ರಾಥಮಿಕ ಶಾಲೆಯ ಪ್ರಧಾನ ಗುರುಗಳಾದ ಎಲ್.ಬಿ. ಬಡಿಗೇರ ಹಾಗೂ ಉಪಾಧ್ಯಕ್ಷರಾಗಿ ಹೂಲಿಹಳ್ಳಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯ ಸಹ ಶಿಕ್ಷಕ ಎಸ್.ಆರ್. ಪಾಟೀಲ ಆಯ್ಕೆಯಾಗಿದ್ದಾರೆ.
ನಗರದ ಮಾನ್ವಿ ಕಂಪನಿ ರಸ್ತೆಯಲ್ಲಿರುವ ಸಹಕಾರಿ ಸಂಘದ ಸಭಾ ಭವನದಲ್ಲಿ ಸೇರಿದ್ದ ಸಹಕಾರಿ ಸಂಘದ ಸರ್ವ ಸದಸ್ಯರ ಸಭೆಯಲ್ಲಿ ಶಿಕ್ಷಕ ಸದಸ್ಯರು ಎಲ್.ಬಿ. ಬಡಿಗೇರ ಇವರನ್ನು ಅಧ್ಯಕ್ಷರನ್ನಾಗಿ ಹಾಗೂ ಎಸ್.ಆರ್. ಪಾಟೀಲರನ್ನು ಉಪಾಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದಾಗಿ ಪ್ರಕಟಣೆ ತಿಳಿಸಿದೆ.