ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

Lingaraj Badiger
Updated On : 28 May 2013, 11:30 am

ಹಾನಗಲ್ಲ: ಕರ್ನಾಟಕ ರಾಜ್ಯ ವೀರಶೈವ ಪಂಚಮಸಾಲಿ ಸಮಾಜ ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ವಿದ್ಯಾರ್ಥಿಗಳು ಮೇ 28ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. 2013ನೇ ಸಾಲಿನ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕಗಳನ್ನು ಗಳಿಸಿದ ತಾಲೂಕಿನ ಪಂಚಮಸಾಲಿ ಸಮಾಜದ ವಿದ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನೀಡಲು ಸಮಾಜದ ವತಿಯಿಂದ ಆಯ್ಕೆ ಮಾಡಲಾಗುತ್ತದೆ. ಅರ್ಹ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿ ಮತ್ತು ಅರ್ಜಿಯನ್ನು ತಾಲೂಕು ಘಟಕಕ್ಕೆ ತಲುಪಿಸಬೇಕೆಂದು ಪ್ರಕಟಣೆ ತಿಳಿಸಿದೆ.
ಅರ್ಜಿ ಹಾಗೂ ದಾಖಲೆಗಳನ್ನು ಶ್ರೀ ಕುಮಾರೇಶ್ವರ ಕಂಪ್ಯೂಟರ್, ಮಿನಿ ವಿಧಾನಸೌಧ ರಸ್ತೆ ಹಾನಗಲ್ಲ (9686060108) ಇವರಲ್ಲಿಗೆ ಮೇ 28ರೊಳಗೆ ತಲುಪಿಸಬೇಕು. ಹೆಚ್ಚಿನ ಮಾಹಿತಿಗಾಗಿ ತಾಲೂಕು ವೀರಶೈವ ಪಂಚಮಸಾಲಿ ಸಮಾಜದ ಅಧ್ಯಕ್ಷ ಮಾಲತೇಶ ಸೊಪ್ಪಿನ (9448966586, 9731950202) ಸಂಪರ್ಕಿಸುವಂತೆ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement