ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ವಸತಿ ನಿಲಯ ಪ್ರವೇಶಕ್ಕೆ ಅರ್ಜಿ ಆಹ್ವಾನ

Lingaraj Badiger
Updated On : 28 May 2013, 11:30 am

ಹಾವೇರಿ: ಶಿಗ್ಗಾಂವಿ ತಾಲೂಕು ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಖಾಲಿ ಇರುವ ಸ್ಥಾನಗಳಿಗೆ 2013-14ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಪರಿಶಿಷ್ಟ ಜಾತಿ, ವರ್ಗ ಹಾಗೂ ಇತರೆ ಹಿಂದುಳಿದ ವಿದ್ಯಾರ್ಥಿಗಳಿಂದ ಮೇ 31ರೊಳಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಶಿಗ್ಗಾಂವಿ, ಬಂಕಾಪುರ, ಹಿರೇಬೆಂಡಿಗೇರಿ ಹಾಗೂ ಅತ್ತಿಗೇರಿ ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯಗಳಿಗೆ ಮತ್ತು ಶಿಗ್ಗಾಂವಿಯ ಬಾಲಕಿಯರ ವಸತಿ ನಿಲಯಕ್ಕೆ 5ನೇ ತರಗತಿಯಿಂದ 10ನೇ ತರಗತಿವರೆಗೆ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು.
ವಿದ್ಯಾರ್ಥಿ ನಿಲಯಗಳಿಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಊಟ, ವಸತಿ, ಪಠ್ಯಪುಸ್ತಕ, ಸಮವಸ್ತ್ರ ಹಾಗೂ ಹಾಸಿಗೆ, ಹೊದಿಕೆ ಇತರೆ ಸೌಲಭ್ಯಗಳನ್ನು ಉಚಿತವಾಗಿ ಪೂರೈಸಲಾಗುವುದು. ನಿಗದಿತ ಅರ್ಜಿ ಫಾರ್ಮ್‌ಗಳನ್ನು ಶಿಗ್ಗಾಂವಿ ತಾಲೂಕು ಸಮಾಜ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು, ಭರ್ತಿ ಮಾಡಿದ ಅರ್ಜಿ ಫಾರ್ಮ್‌ನೊಂದಿಗೆ ಕಳೆದ ಸಾಲಿನ ಅಂಕಪಟ್ಟಿ, ಜಾತಿ ಹಾಗೂ ಆದಾಯ ಪ್ರಮಾಣ ಲಗತ್ತಿಸಿ ಸದರಿ ಕಾರ್ಯಾಲಯಕ್ಕೆ ಸಲ್ಲಿಸಬೇಕೆಂದು ಶಿಗ್ಗಾಂವ ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದೆಂದು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement