ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಆಕರ್ಷಕ ಪಥಸಂಚಲನ, ಟ್ಯಾಬ್ಲೋ ಪ್ರದರ್ಶನ

Mainashree
Updated On : 1 Nov 2013, 11:55 am

ಹಾವೇರಿ: ರಾಜ್ಯೋತ್ಸವ ಅಂಗವಾಗಿ ಜಿಲ್ಲಾ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಥ ಸಂಚಲನ, ಟ್ಯಾಬ್ಲೋ ಪ್ರದರ್ಶನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ವೀರಗಾಸೆ, ಸಾಂಬಾಳ, ಡೊಳ್ಳು ಕುಣಿತ, ಜಾಂಜ್ ಪತಾಕ್‌ಗಳು, ಸಂಗೊಳ್ಳಿ ರಾಯಣ್ಣ, ಸರ್ವಜ್ಞ, ಒನಕೆ ಓಬವ್ವ, ಕನಕದಾಸರ ಟ್ಯಾಬ್ಲೋಗಳು ವಿಶೇಷ ಆಕರ್ಷಣೆಯಾಗಿದ್ದವು. ಸ್ಕೌಟ್ಸ್, ಪೊಲೀಸ್, ಗೃಹರಕ್ಷಕ ದಳ ಹಾಗೂ ವಿದ್ಯಾರ್ಥಿಗಳ ಪಥ ಸಂಚಲನ ಗಮನ ಸೆಳೆಯಿತು. ಪಥ ಸಂಚಲನದಲ್ಲಿ ನಗರದ ಕೆಎಲ್‌ಇ ಆಂಗ್ಲಮಾಧ್ಯಮ ಪ್ರೌಢಶಾಲೆ ಪ್ರಥಮ, ಗೆಳೆಯರ ಬಳಗ ಆಂಗ್ಲ ಮಾಧ್ಯಮ ಪ್ರೌಢಶಾಲೆ ದ್ವಿತೀಯ ಹಾಗೂ ಸೆಂಟ್ ಆನ್ಸ್ ಪ್ರೌಢಶಾಲೆ ತೃತೀಯ ಬಹುಮಾನ ಪಡೆದವು. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ವಿಜಯನಗರ ವೈಭವದ ನೃತ್ಯ ರೂಪಕ ಪ್ರದರ್ಶಿಸಿದ ಲಯನ್ಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಥಮ, ಕೆಎಲ್‌ಇ ಪ್ರೌಢಶಾಲೆ ದ್ವಿತೀಯ ಹಾಗೂ ವಿಶ್ವೇಶ್ವರಯ್ಯ ಆಂಗ್ಲ ಮಾಧ್ಯಮ ಪ್ರೌಢಶಾಲೆ ತೃತೀಯ ಬಹುಮಾನ ಗಳಿಸಿದವು. ಶಾಸಕ ರುದ್ರಪ್ಪ ಲಮಾಣಿ ಹಾಗೂ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ವಿಜೇತರಿಗೆ ಬಹುಮಾನ ವಿತರಿಸಿದರು. ಕಳೆದ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ರಾಣಿಬೆನ್ನೂರಿನ ಲಯನ್ಸ್ ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿದ್ಯಾರ್ಥಿ ರೇಣುಕಾಸ್ವಾಮಿ ಹಿರೇಮಠ ಹಾಗೂ ಶಿಗ್ಗಾಂವಿಯ ಲಕ್ಷ್ಮೀ ಹಿರೇಬಾವಿ ಅವರನ್ನು ಜಿಲ್ಲಾಡಳಿತದ ವತಿಯಿಂದ ಪುರಸ್ಕರಿಸಲಾಯಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement