ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಶುದ್ಧ ನೀರಿನ ಮೂರು ಘಟಕ ಉದ್ಘಾಟನೆ

Mainashree
Updated On : 1 Nov 2013, 11:57 am

ಶುದ್ಧ ನೀರಿನ ಮೂರು ಘಟಕ ಉದ್ಘಾಟನೆ
ರಾಣಿಬೆನ್ನೂರು: ನಗರಕ್ಕೆ ಆಗಮಿಸುವ ಸಾವಿರಾರು ಜನರು, ರೈತರು, ಕೂಲಿ ಕಾರ್ಮಿಕರಿಗೆ ಶುದ್ಧ ಕುಡಿಯುವ ನೀರಿನ ಮೂರು ಘಟಕಗಳನ್ನು ರಾಜ್ಯೋತ್ಸವದ ಕೊಡುಗೆಯಾಗಿ ಅರ್ಪಿಸಲಾಗಿದೆ ಎಂದು ಶಾಸಕ ಕೆ.ಬಿ. ಕೋಳಿವಾಡ ಹೇಳಿದರು. ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಗರದ ಅಂಚೆ ವೃತ್ತ, ನಗರಸಭೆ ಆವರಣ ಹಾಗೂ ತಹಸೀಲ್ದಾರ್ ಕಚೇರಿ ಸಮಿಪದಲ್ಲಿರುವ ಸಂಚಾರಿ ಪೊಲೀಸ್ ಠಾಣೆ ಸಮೀಪ ನಿರ್ಮಿಸಿದ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಅವರು ಉದ್ಘಾಟಿಸಿದರು. ನಗರಸಭೆ ಉಪಾಧ್ಯಕ್ಷ ಶಿವಪ್ಪ ಮಣೇಗಾರ, ಪೌರಾಯುಕ್ತೆ ಅಶ್ವಿನಿ ಬಿ.ಎಂ., ಅಭಿಯಂತರಾದ ಎಸ್.ಬಿ. ಪಾಟೀಲ, ಸದಸ್ಯರಾದ ಪುಟ್ಟಪ್ಪ ಮರಿಯಮ್ಮನವರ, ಪ್ರಭುಸ್ವಾಮಿ ಕರ್ಜಗಿಮಠ, ರತ್ನಾ ಪುನೀತ, ಶಶಿಧರ ಬಸೇನಾಯ್ಕರ, ಬಸವರಾಜ ಹುಚ್ಚಗೊಂಡರ, ರಾಘವೇಂದ್ರ ಚಿನ್ನಿಕಟ್ಟಿ, ಫಯಾಜ್ ಅಹ್ಮದಖಾನ್ ಐರಣಿ, ತಹಸೀಲ್ದಾರ್ ಹನುಮಂತಪ್ಪ ಬಡದಾಳ, ತಾಪಂ ಅಧ್ಯಕ್ಷೆ ಹೂವಕ್ಕ ನಾಗೂರ, ಉಪಾಧ್ಯಕ್ಷ ಗಣೇಶಪ್ಪ ಬಿಲ್ಲಾಳ, ಸದಸ್ಯರಾದ ಬಸನಗೌಡ ಪಾಟೀಲ, ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ಆರ್.ಡಿ. ಹೊಂಬರಡಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement