ಟಿಪ್ಪು ಸುಲ್ತಾನ ಅಭಿಮಾನಿಗಳ ವೇದಿಕೆಗೆ ಮುಲ್ಲಾ ನೇಮಕ
ಹಾನಗಲ್ಲ: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾ ಸಂಘಟನಾ ಕಾರ್ಯದರ್ಶಿಯನ್ನಾಗಿ ಹಾನಗಲ್ಲ ತಾಲೂಕಿನ ರಾಮತೀರ್ಥ-ಹೊಸಕೊಪ್ಪ ಗ್ರಾಮದ ಎಂ.ಎಂ. ಮುಲ್ಲಾ ಅವರನ್ನು ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿ ನೇಮಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಜಿಲ್ಲಾಧ್ಯಕ್ಷ ಅಬ್ದುಲ್ ರಜಾಕ್ ಎಂ. ಮುಲ್ಲಾ, ಎಲ್ಲರನ್ನು ವಿಶ್ವಾಸಕ್ಕೆ ಪಡೆದು ಸಾಮಾಜಿಕ ಕಾರ್ಯಗಳ ಮೂಲಕ ಸಾಮರಸ್ಯ ಮೂಡಿಸಲು, ಪ್ರತಿವರ್ಷ ಕನ್ನಡ ರಾಜ್ಯೋತ್ಸವ, ಟಿಪ್ಪು ಸುಲ್ತಾನ ಜಯಂತಿ ಕಾರ್ಯಕ್ರಮ ಆಚರಿಸಲು ಸೂಚಿಸಿದ್ದಾರೆ.
--