ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಳಪೆ ಕಾಮಗಾರಿ: ಬ್ಯಾಡಗಿ ಪುರಸಭೆ ಸದಸ್ಯರ ಆಕ್ರೋಶ

Vishwanath S
Updated On : 7 Nov 2013, 11:21 am

ಬ್ಯಾಡಗಿ: ನಗರೋತ್ಥಾನ ಯೋಜನೆಯಡಿ ಪಟ್ಟಣದಲ್ಲಿ ಮಾಡಲಾದ ಕಾಂಕ್ರೀಟ್ ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಪುರಸಭೆ ಸದಸ್ಯರು ಆರೋಪಿಸಿದ್ದಾರೆ. ಕಳೆದ ಸರ್ಕಾರದ ಅವಧಿಯಲ್ಲಿ ಮಂಜೂರಾದ ಯೋಜನೆಗಳನ್ನು ಈಗಿನ ಸರ್ಕಾರ ಸಮರ್ಪಕವಾಗಿ ಅನುಷ್ಠಾನಗೊಳಿಸುತ್ತಿಲ್ಲ. ಗುತ್ತಿಗೆದಾರನ ನಿಯಂತ್ರಣದಲ್ಲಿ ಅಧಿಕಾರಿಗಳಿದ್ದು,  ಯೋಜನೆಗಳು ಸಾರ್ವಜನಿಕರಿಗೆ ತಲುಪುವ ಅನುಮಾನವಿದೆ ಎಂದರು.
ರು. 5 ಕೋಟಿ ವೆಚ್ಚದ ರಸ್ತೆ, ಚರಂಡಿ ಕಾಮಗಾರಿಯನ್ನು ಮುಂಬೈನ ಈಗಲ್ ಕನಸ್ಟ್ರಕ್ಷನ್ಸ್‌ಗೆ ವಹಿಸಲಾಗಿದೆ. ಆದರೆ, ಒಳಗುತ್ತಿಗೆ ನೀಡಿರುವ ಗುಮಾನಿಯಿದೆ. ಗುತ್ತಿಗೆ ನಿಯಮ ಉಲ್ಲಂಘಿಸಿದ್ದು, ಜಿಲ್ಲಾಧಿಕಾರಿ ಸೂಕ್ತ ಪರಿಶೀಲನೆ ನಡೆಸುವಂತೆ ಆಗ್ರಹಿಸಿದ್ದಾರೆ. ಬಸ್ ನಿಲ್ದಾಣದ ಬಳಿ ನೆಹರೂ ವೃತ್ತದ ಸುತ್ತಲೂ ನಡೆಸುತ್ತಿರುವ ಕಾಂಕ್ರೀಟ್ ಕಾಮಗಾರಿ ಕಳಪೆಯಾಗಿದ್ದು, ಈ ಕುರಿತು ಸುತ್ತಮುತ್ತಲಿನ ನಿವಾಸಿಗಳು ಪುರಸಭೆ ಸದಸ್ಯರಿಗೆ ಮೌಖಿಕ ದೂರು ನೀಡಿರುತ್ತಾರೆ. ಈ ಕುರಿತು ಮುಖ್ಯಾಧಿಕಾರಿಗೆ ಸೂಕ್ತ ಪರಿಶೀಲನೆ ನಡೆಸುವಂತೆ ಸೂಚಿಸಿದರೂ ಪ್ರಯೋಜನವಾಗಿಲ್ಲ ಎಂದರು. ಕಾಮಗಾರಿಗೆ ಕಳಪೆ ಗುಣಮಟ್ಟದ ವಸ್ತುಗಳನ್ನು ಬಳಕೆ ಮಾಡಲಾಗುತ್ತಿದೆ. ಸೂಕ್ತ ಕ್ರಮ ಜರುಗಿಸದಿದ್ದರೆ ಗುತ್ತಿಗೆದಾರನ ವಿರುದ್ಧ ಪ್ರತಿಭಟನೆ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಕಾಮಗಾರಿ ಜಿಲ್ಲಾಧಿಕಾರಿ ಮಾರ್ಗದರ್ಶನದಲ್ಲಿ ನಡೆಯುತ್ತಿದ್ದು, ಈ ಕುರಿತು ಮಾತನಾಡುವುದಿಲ್ಲ ಎನ್ನುತ್ತಾರೆ ಮುಖ್ಯಾಧಿಕಾರಿ ವೀರೇಶಕುಮಾರ.
ಪುರಸಭೆ ಸದಸ್ಯರಾದ ರಾಮಣ್ಣ ಕೋಡಿಹಳ್ಳಿ, ಬಸವರಾಜ ಛತ್ರದ, ನಾರಾಯಣಪ್ಪ ಕರ್ನೂಲ, ಬಸವರಾಜ ಹಂಜಿ, ಪ್ರಶಾಂತ್ ಯಾದವಾಡ, ವಿಜಯ ಮಾಳಗಿ, ಮಂಜುನಾಥ ಮಾಳಗಿ, ವಿಜಯ ಸಜ್ಜನಶೆಟ್ರ ಉಪಸ್ಥಿತರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement