ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಹತ್ಯಾಚಾರ ತನಿಖೆ ಸಿಬಿಐಗೆ: ಎಸ್ಸೆಫ್‌ಐ

Vishwanath S
Updated On : 9 Nov 2013, 11:59 am

ಕನ್ನಡಪ್ರಭ ವಾರ್ತೆ, ಬ್ಯಾಡಗಿ, ನ. 8
ಮಹಿಳೆಯರ ಅತ್ಯಾಚಾರ ಹಾಗೂ ಕೊಲೆಗೆ ಸಂಬಂಧಿಸಿದ ಎಲ್ಲ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಳಪಡಿಸುವಂತೆ ಆಗ್ರಹಿಸಿ ಭಾರತೀಯ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫ್‌ಐ) ತಾಲೂಕು ಘಟಕದ ಕಾರ್ಯಕರ್ತರು ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜಿಲ್ಲಾ ಘಟಕದ ಉಪಾಧ್ಯಕ್ಷ ಮಂಜುನಾಥ ಪೂಜಾರ ಮಾತನಾಡಿ, ಮಹಿಳೆಯರ ಮೇಲೆ ನಡೆಯುತ್ತಿರುವ ಅತ್ಯಾಚಾರ, ಕೊಲೆ ಹಾಗೂ ದೌರ್ಜನ್ಯಗಳನ್ನು ಪರಿಣಾಮಕಾರಿಯಾಗಿ ತಡೆಗಟ್ಟುವಲ್ಲಿ ಪೊಲೀಸ್ ಇಲಾಖೆ ವಿಫಲವಾಗಿದೆ ಎಂದು ಆರೋಪಿಸಿದರು.
ದಕ್ಷಿಣ ಕನ್ನಡದ ಬೆಳ್ತಂಗಡಿಯಲ್ಲಿ ವಿದ್ಯಾರ್ಥಿನಿ ಸೌಜನ್ಯಾಳ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪಾಲಕರು ಪೊಲೀಸ್ ಠಾಣೆಗೆ ದೂರು ಸಲ್ಲಿಸಲು ತೆರಳಿದಾಗ ಕಾಣದ ಕೈಗಳು ದೂರು ದಾಖಲಾಗದಂತೆ ನೋಡಿಕೊಂಡಿದ್ದಲ್ಲದೆ, ಇಡೀ ಪ್ರಕರಣವನ್ನೇ ಮುಚ್ಚಿಹಾಕುವ ಹುನ್ನಾರ ನಡೆದಿತ್ತು. ಇಂತಹ ಘಟನೆಗಳಲ್ಲಿ ದುಃಖದ ಮಡುವಿನಲ್ಲಿರುವ ಕುಟುಂಬಗಳಿಗೆ ಸಾಂತ್ವನದ ಮಾತುಗಳಷ್ಟೇ ಸಾಲದು. ಹತ್ಯಾಚಾರಿಗಳಿಗೆ ಸೂಕ್ತ ಶಿಕ್ಷೆಯಾಗುವ ಮೂಲಕ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದರು.
ವಸಂತ ಬ್ಯಾಟಪ್ಪನವರ ಮಾತನಾಡಿ, ಎಸ್‌ಎಫ್‌ಐ ಮುಂತಾದ ಪ್ರಗತಿಪರ ಸಂಘಟನೆಗಳ ಪ್ರತಿಭಟನೆ ಹಾಗೂ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಕೊನೆಗೂ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿದೆ. ಹಾಗಿದ್ದರೆ ಅನ್ಯಾಯಕ್ಕೆ ಒಳಗಾದವರಿಗೆ ನ್ಯಾಯ ಒದಗಿಸುವವರು ಯಾರೆಂದು ಪ್ರಶ್ನಿಸಿದರು.
ಎಲ್ಲ ಪ್ರಕರಣಗಳಲ್ಲೂ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸಬೇಕೇ? ಇಂತಹ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸೌಜನ್ಯಾ ಅತ್ಯಾಚಾರ ಹಾಗೂ ಕೊಲೆ ಪ್ರಕರಣ ಮಾದರಿಯಲ್ಲಿ ರಾಜ್ಯದಲ್ಲಿರುವ 460 ಪ್ರಕರಣಗಳನ್ನು ಸರ್ಕಾರ ಸಿಬಿಐ ತನಿಖೆಗೆ ಒಳಒಡಿಸುವಂತೆ ಆಗ್ರಹಿಸಿದರು.
ರಾಘವೇಂದ್ರ ಭೋವಿ, ಅಂಗವಿಕಲ ಸಂಘದ ತಾಲೂಕಾಧ್ಯಕ್ಷ ಪಾಂಡುರಂಗ ಸುತಾರ, ಪ್ರಕಾಶ ಛತ್ರದ, ಮಣ್ಣಪ್ಪ ಬಂಗೇರ್, ಅಹ್ಮದ್ ರಜಾಕ್, ಎಸ್.ಎಂ. ಡಾವಣಗೇರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement