ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ರಸ್ತೆ ದುರಸ್ತಿಗೆ ಕ್ರಮ ಕೈಗೊಳ್ಳಿ: ಶಾಸಕ ಬಣಕಾರ

Mainashree
Updated On : 15 Nov 2013, 11:22 am

ಹಿರೇಕೆರೂರು: ನಾಲ್ಕು ತಿಂಗಳಿನಿಂದ ಸುರಿದ ಮಳೆಯಿಂದಾಗಿ ತಾಲೂಕಿನ ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಸಂಚಾರಕ್ಕೆ ತೊಂದರೆಯಾಗಿದೆ. ಕೆಲವು ಗ್ರಾಮಗಳಿಗೆ ಬಸ್ ಸಂಚಾರವೂ ಸ್ಥಗಿತಗೊಂಡಿದೆ. ತಕ್ಷಣವೇ ರಸ್ತೆ ದುರಸ್ತಿ ಮಾಡುವಂತೆ ಶಾಸಕ ಯು.ಬಿ. ಬಣಕಾರ ಅಧಿಕಾರಿಗಳಿಗೆ ಸೂಚಿಸಿದರು.
ಪಟ್ಟಣ ತಹಸೀಲ್ದಾರ್ ಕಚೇರಿಯಲ್ಲಿ ಜರುಗಿದ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹದಗೆಟ್ಟ ರಸ್ತೆ ದುರಸ್ತಿ ಮಾಡಿ, ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಬಸ್ ಸಂಚಾರ ಪುನಾರಂಭಿಸಲು ಕ್ರಮ ಕೈಗೊಳ್ಳಬೇಕು. ಕಳೆದ ಸಭೆಯಲ್ಲಿ ತಾಲೂಕಿನ 14 ರಸ್ತೆಗಳ ನಿರ್ವಹಣೆಗಾಗಿ ರು. 42 ಲಕ್ಷ ಅನುದಾನ ಬಿಡುಗಡೆಗೆ ಜಿಲ್ಲಾಧಿಕಾರಿಗೆ ಮನವಿ ಮಾಡಲಾಗಿದೆ. ಲೋಕೋಪಯೋಗಿ ಇಲಾಖೆಯ 5 ರಸ್ತೆಗಳ ನಿರ್ವಹಣೆಗಾಗಿ ರು. 37 ಲಕ್ಷ ಹಾಗೂ ತಾಲೂಕಿನ 18 ಗ್ರಾಮಗಳ ಜನತೆಗೆ ಶುದ್ಧ ಕುಡಿಯುವ ನೀರಿನ ಯೋಜನೆಗಾಗಿ ರು. 57 ಲಕ್ಷದ ಪ್ರಸ್ತಾವನೆ ಸಲ್ಲಿಸಲಾಗಿದ್ದು, ತಕ್ಷಣವೇ ಅನುದಾನ ಬಿಡುಗಡೆ ಮಾಡುವಂತೆ ಸೂಚಿಸಿದರು. ತಹಸೀಲ್ದಾರ್ ಶಕುಂತಲಾ ಚೌಗುಲೆ, ಜಿಪಂ ಅಭಿಯಂತ ರುದ್ರಪಶುಪತಿ, ಶಿರಸ್ತೇದಾರ ಎಂ.ಡಿ. ಕಿಚಿಡೇರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement