ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮಕ್ಕಳನ್ನು ದುಡಿಸಿದರೆ ಶಿಕ್ಷೆ: ನ್ಯಾ. ಬಾಳಪ್ಪ ಜರಗು

Lingaraj Badiger
Updated On : 19 Nov 2013, 10:49 am

ರಾಣಿಬೆನ್ನೂರು: 16 ವರ್ಷದೊಳಗಿನ ಎಲ್ಲ ಮಕ್ಕಳು ಉಚಿತವಾಗಿ ಶಿಕ್ಷಣ ಪಡೆಯುವ ಹಕ್ಕು ಹೊಂದಿದ್ದು, ಅವರನ್ನು ಬಾಲ ಕಾರ್ಮಿಕರಾಗಿ ದುಡಿಸುವುದು ಶಿಕ್ಷಾರ್ಹ ಎಂದು ಇಲ್ಲಿನ ಜೆಎಂಎಫ್‌ಸಿ ನ್ಯಾಯಾಲಯದ ಪ್ರಧಾನ ದಿವಾಣಿ ನ್ಯಾಯಾಧೀಶ ಬಾಳಪ್ಪ ಜರಗು ತಿಳಿಸಿದರು. ಕಾನೂನು ಸೇವಾ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಆಶ್ರಯದಲ್ಲಿ ಮಕ್ಕಳ ದಿನಾಚರಣೆ ಅಂಗವಾಗಿ ಮಾರುತಿ ನಗರದ ಸರ್ಕಾರಿ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಉಚಿತ ಕಾನೂನು ಅರಿವು ನೆರವು ಶಿಬಿರ ಉದ್ಘಾಟಿಸಿ, ಪಾಲಕರು ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಅದರ ಬದಲು ಕೆಲಸಕ್ಕೆ ಕಳುಹಿಸುವುದು ಅಪರಾಧ. ಬಾಲಕಾರ್ಮಿಕರನ್ನು ದುಡಿಸಿಕೊಳ್ಳುತ್ತಿರುವ ಹಾಗೂ ದುಡಿಯಲು ಕಳಿಸಿದ ವ್ಯಕ್ತಿಗಳು ಶಿಕ್ಷಾರ್ಹರು ಎಂದರು. ಸಹಾಯಕ ಸರ್ಕಾರಿ ಅಭಿಯೋಜಕ ಎಂ.ಎಚ್. ಅಂಕದ ಮಾತನಾಡಿ, ದೇವರ ಸಮಾನರಾದ ಮಕ್ಕಳನ್ನು ಕೈಗಾರಿಕೆ, ಮಂಡಕ್ಕಿ ಭಟ್ಟಿ, ಗ್ಯಾರೆಜು ಮುಂತಾದೆಡೆ ಕೆಲಸಕ್ಕೆ ಕಳುಹಿಸುವ ಬದಲು ಶಿಕ್ಷಣ ಕೊಡಿಸಲು ಮುಂದಾಗಬೇಕೆಂದು ತಿಳಿಸಿದರು. ನ್ಯಾಯವಾದಿ ಕೆ.ಡಿ. ಮಡಿವಾಳರ ಮಕ್ಕಳ ಹಕ್ಕುಗಳ ಕುರಿತು ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ಮಕ್ಕಳ ಶಿಕ್ಷಣ ಹಾಗೂ ಬಾಲಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರಗಳು ಜಾರಿಗೆ ತಂದಿರುವ ಯೋಜನೆಗಳನ್ನು ವಿವರಿಸಿದರು. ಸರ್ಕಾರಿ ಪ್ರೌಢಶಾಲೆಯ ಪ್ರಧಾನಗುರು ಕೆ.ವಿ. ಗೊಲ್ಲರ ಪ್ರಾಸ್ತಾವಿಕ ಮಾತನಾಡಿದರು. ಎಸ್.ಬಿ. ಅಡರಕಟ್ಟಿ, ಆರ್.ಬಿ. ಚಲವಾದಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement