ಅಕ್ರಮ ಮರಳು ಸಾಗಾಟ: 8 ಟ್ರ್ಯಾಕ್ಟರ್ ವಶ
ಹಾವೇರಿ: ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ 8 ಟ್ರ್ಯಾಕ್ಟರ್‌ಗಳನ್ನು ತಹಸೀಲ್ದಾರ ನೇತೃತ್ವದಲ್ಲಿ ಪೊಲೀಸರು ದಾಳಿ ನಡೆಸಿ ಬುಧವಾರ ವಶಕ್ಕೆ ತೆಗೆದುಕೊಂಡಿದ್ದಾರೆ.
ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ ನೇತೃತ್ವದಲ್ಲಿ ದಾಳಿ ನಡೆಸಿ ಅಕ್ರಮವಾಗಿ ಮರಳು ಸಾಗಣೆ ಮಾಡುತ್ತಿದ್ದ ವೇಳೆ ಟ್ರ್ಯಾಕ್ಟರ್ ವಶಕ್ಕೆ ಪಡೆಯಲಾಗಿದೆ. ವಶಪಡಿಸಿಕೊಂಡ ಟ್ರ್ಯಾಕ್ಟರ್‌ಗಳನ್ನು ನಗರ ಠಾಣೆ ಸುಪರ್ದಿಯಲ್ಲಿ ಇಡಲಾಗಿದ್ದು, ಗುರುವಾರ ಅದನ್ನು ಗಣಿ ಮತ್ತು ಭೂವಿಜ್ಞಾನ ಇಲಾಖೆ ವಶಕ್ಕೆ ನೀಡಲಾಗುತ್ತದೆ ಎಂದು ತಿಳಿದುಬಂದಿದೆ. ಗಣಿ ಇಲಾಖೆ ಅಧಿಕಾರಿಗಳು ಮರಳು ಸಾಗಣೆ ಟ್ರ್ಯಾಕ್ಟರ್‌ಗಳಿಗೆ ದಂಡ ವಿಧಿಸಲಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.