ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅಧ್ಯಯನ ಹವ್ಯಾಸ ಬೆಳೆಸಿಕೊಳ್ಳಿ: ಮಠದ

Lingaraj Badiger
Updated On : 21 Nov 2013, 12:12 pm

ಹಿರೇಕೆರೂರು: ಗ್ರಂಥಾಲಯಗಳಲ್ಲಿರುವ ವಿವಿಧ ಪುಸ್ತಕಗಳ ಅಧ್ಯಯನದ ಮೂಲಕ ಮನಸ್ಸನ್ನು ಸದೃಢವಾಗಿಸಲು ಸಾಧ್ಯವಿದ್ದು, ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಗ್ರಂಥಗಳ ಅಧ್ಯಯನ ಹವ್ಯಾಸ ಬೆಳೆಸಿಕೊಳ್ಳಬೇಕು ಎಂದು ಹಾವೇರಿ ಜಿಲ್ಲಾ ಕೇಂದ್ರ ಗ್ರಂಥಾಲಯ ಪ್ರಾಧಿಕಾರದ ಸದಸ್ಯ ಹಾಗೂ ರಾಷ್ಟ್ರಪ್ರಶಸ್ತಿ ಪುರಸ್ಕೃತ ಜಿ.ಎಂ. ಮಠದ ಕರೆ ನೀಡಿದರು.  ಪಟ್ಟಣದ ಸಾರ್ವಜನಿಕ ಗ್ರಂಥಾಲಯದಲ್ಲಿ ಜರುಗಿದ ಗ್ರಂಥಾಲಯ ಸಪ್ತಾಹದ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಉಪನ್ಯಾಸ ನೀಡಿದರು. ಗ್ರಂಥಾಲಯಗಳು ಮಹಾನ್ ವ್ಯಕ್ತಿಗಳ ಜೀವನ ಚರಿತ್ರೆ ಹಾಗೂ ಇತ್ತೀಚೆಗೆ ರಚನೆ ಮಾಡಿದ ಎಲ್ಲ ಸಾಹಿತಿಗಳ ಪುಸ್ತಕಗಳ ಸಂಗ್ರಹವಾಗಿರುತ್ತದೆ. ದೈನಂದಿನ ಪತ್ರಿಕೆಗಳು, ವಾರಪತ್ರಿಕೆಗಳನ್ನು ಹಾಗೂ ಉದ್ಯೋಗ ಮಾರ್ಗದರ್ಶಿ, ಸಾಮಾನ್ಯ ಜ್ಞಾನದ ಬಹು ಉಪಯೋಗಿ ಪುಸ್ತಕ ಲಭ್ಯವಿರುತ್ತವೆ. ಶಾಲಾ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ತಮ್ಮ ಬಿಡುವಿನ ವೇಳೆ ಗ್ರಂಥಾಲಯದ ಪುಸ್ತಕಗಳ ಅಧ್ಯಯನ ಮಾಡುವ ಮೂಲಕ ಜ್ಞಾನ ವೃದ್ದಿಸಿಕೊಳ್ಳಬೇಕೆಂದರು. ಬಿ.ಕೆ. ಹೊಸಳ್ಳಿ, ಧರಣಿಂಧ್ರಕುಮಾರ ಇನ್ನಿತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement