ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮೈದಾನ ಅಭಿವೃದ್ಧಿ ಕಾಮಗಾರಿಗೆ ಚಾಲನೆ

Mainashree
Updated On : 23 Nov 2013, 11:05 am

ಹಾನಗಲ್ಲ: ತಾಲೂಕಿನ ಚಿಕ್ಕಾಂಶಿಹೊಸೂರು ಗ್ರಾಮದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಸಂಯುಕ್ತ ಪದವಿಪೂರ್ವ ಕಾಲೇಜು ಮೈದಾನ ಅಭಿವೃದ್ಧಿ ಕಾಮಗಾರಿಗೆ ಶಾಸಕ ಮನೋಹರ ತಹಸೀಲ್ದಾರ್ ಭೂಮಿಪೂಜೆ ನೇರವೆರಿಸಿದರು.
ಗ್ರಾಮ ಪಂಚಾಯಿತಿ ಸದಸ್ಯ ಭದ್ರಗೌಡ ಪಾಟೀಲ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಶಿವಾನಂದಪ್ಪ ಈಳಿಗೇರ, ಜಿಪಂ ಸದಸ್ಯ ಕಸ್ತೊರೆವ್ವ ವಡ್ಡರ ತಾಪಂ ಸದಸ್ಯರಾದ ರೇಖಾ ಕಳಸಳ್ಳಿ, ಕಮಲಮ್ಮ ತಳವಾರ, ಗ್ರಾಪಂ ಸದಸ್ಯರಾದ ಲೀಲಾವತಿ ಈಳಿಗೇರ, ಮಂಜುನಾಥ ವಡ್ಡರ, ಶಾಲಾ ಅಭಿವೃದ್ದಿ ಸಮಿತಿ ಸದಸ್ಯರು, ಕಾರ್ಯನಿರ್ವಾಕ ಅಧಿಕಾರಿಗಳಾದ ಡಾ. ಬಸವರಾಜ ಡಿ.ಸಿ, ಹಾಗೂ ಪ್ರಭಾರ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎಂ.ಬಿ. ಕುಳ್ಳನಿಂಬಣ್ಣನವರ ಮತ್ತು ಸಿಬ್ಬಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

25ಕ್ಕೆ ಜಿಪಂ  ಸಭೆ
ಹಾವೇರಿ: ಇಲ್ಲಿನ ಜಿಲ್ಲಾ ಪಂಚಾಯಿತಿ ಸಾಮಾನ್ಯ ಸಭೆ ನ. 25ರಂದು ಬೆಳಗ್ಗೆ 11 ಗಂಟೆಗೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಜರುಗಲಿದೆ. ಸಭೆ ಅಧ್ಯಕ್ಷತೆಯನ್ನು ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ ವಹಿಸಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement