ಇಂದು ವಿದ್ಯುತ್ ವ್ಯತ್ಯಯ
ಹಾನಗಲ್ಲ: ಇಲ್ಲಿನ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಎನ್‌ಜೆವೈ ಕಾಮಗಾರಿ ನ. 27ರಂದು ನಡೆಯಲಿದೆ. ಈ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ 10ರಿಂದ ಸಂಜೆ 5 ಗಂಟೆ ವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ. ಹಾನಗಲ್ಲಿನ 110 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ಬರುವ 11 ಕೆವಿ ಮಾರ್ಗಗಳಾದ ಹಾನಗಲ್ಲ ಪಟ್ಟಣ, ಅಕ್ಕಿಆಲೂರು, ಕರಗುದರಿ, ಕೊಪ್ಪರಸಿಕೊಪ್ಪ, ಬೈಚವಳ್ಳಿ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಇರುವುದಿಲ್ಲ. ಗ್ರಾಹಕರು ಸಹಕರಿಸಬೇಕೆಂದು ಹೆಸ್ಕಾಂ ಸಹಾಯಕ ಕಾರ್ಯಪಾಲಕ ಅಭಿಯಂತ ಕೃಷ್ಣಪ್ಪ ತಿಳಿಸಿದ್ದಾರೆ.
ಕೌಶಲ್ಯ ತರಬೇತಿಗೆ ಅರ್ಜಿ
ಹಾವೇರಿ: ವಾರ್ತಾ ಇಲಾಖೆ ಪ್ರಸಕ್ತ ಸಾಲಿನ ಗಿರಿಜನ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಪಂಗಡಕ್ಕೆ ಸೇರಿದ ಪದವೀಧರರಿಂದ ಕೌಶಲ್ಯ ತರಬೇತಿಗಳಿಗಾಗಿ ಅರ್ಜಿ ಆಹ್ವಾನಿಸಿದ್ದು, ಅರ್ಹತೆ ಸಡಿಲಗೊಳಿಸಲಾಗಿದೆ. ವೃತ್ತಿ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿ ಪತ್ರಿಕೋದ್ಯಮ/ ಸಮೂಹ ಸಂವಹನ/ ವಿದ್ಯುನ್ಮಾನ ಮಾಧ್ಯಮ ವಿಷಯದಲ್ಲಿ ಪದವಿ/ ಸ್ನಾತಕ ಪದವಿ/ ಪಿಜಿ ಡಿಪ್ಲೊಮಾ ಪಡೆದಿರಬೇಕು. ನಿರೂಪಣಾ ಕೌಶಲ್ಯ ತರಬೇತಿಗೆ ಅರ್ಜಿ ಸಲ್ಲಿಸಲು ಪದವಿ/ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಸಕ್ತರು ನಿಗದಿತ ನಮೂನೆಯಲ್ಲಿ ಸ್ವವಿವರ ಹಾಗೂ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಭರ್ತಿ ಮಾಡಿ ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು 560001- ಈ ಕಚೇರಿಗೆ ಸಲ್ಲಿಸಬೇಕು. ಢಿಢಿಢಿ.್ಞಛ್ಠಟಿಛಡಿಛ್ಞಛಢಛ್ಠಝಿಜ.್ಟ್ಠ್ಜ ಅಂತರ್ಜಾಲ ತಾಣದಿಂದ ಅರ್ಜಿ ನಮೂನೆ ಡೌನ್‌ಲೋಡ್ ಮಾಡಬಹುದು.
ಲ್ಯಾಪ್‌ಟಾಪ್‌ಗೆ ಅರ್ಜಿ
ಹಾವೇರಿ: ವಾರ್ತಾ ಇಲಾಖೆ ಗಿರಿಜನ ಉಪಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ ಪತ್ರಿಕೋದ್ಯಮ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಲು ಲ್ಯಾಪ್‌ಟಾಪ್ ಹಾಗೂ ಡಿಜಿಟಲ್ ಕ್ಯಾಮೆರಾ ವಿತರಿಸುವ ಯೋಜನೆ ಹಮ್ಮಿಕೊಂಡಿದೆ. ವಿದ್ಯಾರ್ಹತೆ ನಿಯಮಗಳಲ್ಲಿ ಸಡಿಲಿಕೆ ತರಲಾಗಿದ್ದು, ರಾಜ್ಯದಲ್ಲಿ ಪ್ರಸ್ತುತ ಪೂರ್ಣಾವಧಿ ಪದವಿ ಹಾಗೂ ಸ್ನಾತಕೋತ್ತರ ಪದವಿಗಳಲ್ಲಿ ಪತ್ರಿಕೋದ್ಯಮ/ ಸಮೂಹ ಸಂವಹನ/ ವಿದ್ಯುನ್ಮಾನ ಮಾಧ್ಯಮ ವಿಷಯಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಈ ಸೌಲಭ್ಯಕ್ಕೆ ಅರ್ಹರು. ಪ್ರಸ್ತುತ ಪತ್ರಿಕೋದ್ಯಮ ಐಚ್ಛಿಕ ವಿಷಯವಾಗಿರುವ ರಾಜ್ಯದ ಎಲ್ಲ ಸರ್ಕಾರಿ ಪದವಿ ಕಾಲೇಜುಗಳ ಪ್ರಾಚಾರ್ಯರು, ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥರು ಕಾಲೇಜಿನ / ವಿಭಾಗದ ಪರಿಶಿಷ್ಟ ಪಂಗಡದ ಎಲ್ಲ ಪತ್ರಿಕೋದ್ಯಮ ವಿದ್ಯಾರ್ಥಿಗಳ ಪಟ್ಟಿಯನ್ನು ನಿರ್ದೇಶಕರು, ವಾರ್ತಾ ಇಲಾಖೆ, ವಾರ್ತಾ ಸೌಧ, ನಂ. 17, ಭಗವಾನ್ ಮಹಾವೀರ ರಸ್ತೆ, ಬೆಂಗಳೂರು-560001 ಈ ಕಚೇರಿಗೆ, ಇ-ಮೇಲ್ ಡ್ಛಠಡಿಡಠ್ಝಟಿಜ್ಟ್ಠಿಟಛಡ್ಝ್ಟಿಟಿಅ್ಜಟಛ್ಝಟ.್ಛ್ಟಟಕ್ಕೆ ನ. 30ರೊಳಗೆ ಸಲ್ಲಿಸಬೇಕು. ಪಟ್ಟಿಯಲ್ಲಿ, ವಿದ್ಯಾರ್ಥಿಗಳ ಹೆಸರು, ವಿಳಾಸ, ದೂರವಾಣಿ ಸಂಖ್ಯೆ, ಪದವಿ ಹಾಗೂ ತರಗತಿ, ಜಾತಿ, ಹಿಂದಿನ ಪರೀಕ್ಷೆಯಲ್ಲಿ ಪಡೆದಿರುವ ಅಂಕಗಳ ವಿವರ ನೀಡಬೇಕು. ಮೆರಿಟ್ ಆಧಾರದಲ್ಲಿ ಆಯ್ಕೆ ಮಾಡಲಾಗುವುದು.