73, 74ನೇ ವಿಧಿ ತಿದ್ದುಪಡಿಯಿಂದ ಗ್ರಾಮೀಣಾಭಿವೃದ್ಧಿ: ಶಾಸಕ ಕೋಳಿವಾಡ
ಕನ್ನಡಪ್ರಭ ವಾರ್ತೆ, ರಾಣಿಬೆನ್ನೂರು, ಅ. 26
ದಿ. ರಾಜೀವ್ ಗಾಂಧೀಜಿಯವರು ಪ್ರಧಾನ ಮಂತ್ರಿಗಳಾಗಿದ್ದ ಸಂದರ್ಭ ಭಾರತ ಸಂವಿಧಾನದ 73 ಹಾಗೂ 74ನೇ ವಿಧಿಗೆ ತಿದ್ದುಪಡಿ ತರುವುದರೊಂದಿಗೆ ದೇಶದ ಗ್ರಾಮಾಂತರ ಪ್ರದೇಶಗಳ ಅಭಿವೃದ್ಧಿಗಾಗಿ ಕಾರ್ಯ ನಿರ್ವಹಿಸುತ್ತಿರುವ ಗ್ರಾಮ ಪಂಚಾಯಿತಿಗಳು ಆರ್ಥಿಕವಾಗಿ ಬಲಗೊಳ್ಳಲು ಮತ್ತು ಗ್ರಾಮೀಣ ಪ್ರದೇಶಗಳು ಪ್ರಗತಿ ಹೊಂದಲು ಸಾಧ್ಯವಾಗಿದೆ ಎಂದು ಶಾಸಕ ಕೆ.ಬಿ. ಕೋಳಿವಾಡ ಹೇಳಿದರು.
ಗ್ರಾಮೀಣಾಭಿವೃದ್ಧಿಯ 7 ಯೋಜನೆಗಳು ಕುರಿತು ಸರ್ಕಾರ ಜಾರಿಗೆ ತಂದಿರುವ ಯೋಜನೆಗಳ ಕೈಪಿಡಿ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ದಿ. ರಾಜೀವ್ ಗಾಂಧಿಯವರು ಭಾರತದ ಪ್ರಧಾನ ಮಂತ್ರಿಯಾಗಿದ್ದ ಸಂದರ್ಭ, ದೇಶದ ಗ್ರಾಮೀಣ ಪ್ರದೇಶದ ಸರ್ವತೋಮುಖ ಅಭಿವೃದ್ಧಿಗಾಗಿ ಹಾಗೂ ಸಮಾಜದ ಅತ್ಯಂತ ಕಟ್ಟಕಡೆಯ ವ್ಯಕ್ತಿಗೂ ಕೇಂದ್ರ ಮತ್ತು ರಾಜ್ಯ ಸರ್ಕಾರ ಜಾರಿಗೆ ತರುವ ಯೋಜನೆಯ ಫಲ ದೊರೆಯುವಂತಾಗಲೆಂದು ಅಂದು ಅವರು, ಕಂಡಿದ್ದ ಕನಸನ್ನು ರಾಜ್ಯದಲ್ಲಿ ಇಂದು ಆಡಳಿತಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ನನಸಾಗಿಸುತ್ತಿದೆ ಎಂದರು.
ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಮೂರ್ತಿ, ಅಧ್ಯಕ್ಷೆ ಹೂವಕ್ಕ ನಾಗೂರು, ಉಪಾಧ್ಯಕ್ಷ ಗಣೇಶಪ್ಪ ಬಿಲ್ಲಾಳ, ಜಿಲ್ಲಾ ಪಂಚಾಯಿತಿ ಸದಸ್ಯರಾದ ಶಿವಕುಮಾರ ಮುದ್ದಪ್ಪಳವರ ಹಾಗೂ ತಾಲೂಕಿನ 35 ಗ್ರಾಮ ಪಂಚಾಯಿತಿ ಅಧ್ಯಕ್ಷ ಸದಸ್ಯರು ಅಭಿವೃದ್ಧಿ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.