ಅಂಬೇಡ್ಕರ್ ಜಯಂತಿ ಆಚರಣೆ
ಹಾವೇರಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ 123ನೇ ಜನ್ಮ ದಿನಾಚರಣೆಯನ್ನು ಸೋಮವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಚರಿಸಲಾಯಿತು.
ಲೋಕಸಭಾ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಸರಳವಾಗಿ ಆಚರಿಸಲಾದ ಈ ಕಾರ್ಯಕ್ರಮದಲ್ಲಿ, ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ ಅವರು ಡಾ. ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಿದರು.
ಇದಕ್ಕೂ ಮುಂಚೆ ಸುಭಾಸ ವೃತ್ತದಲ್ಲಿರುವ ಡಾ. ಅಂಬೇಡ್ಕರ್ ಪ್ರತಿಮೆಗೆ ಜಿಲ್ಲಾಧಿಕಾರಿಗಳು ಮಾಲಾರ್ಪಣೆ ಮಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ, ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಬಿ. ಆಂಜನಪ್ಪ, ಅಪರ ಜಿಲ್ಲಾಧಿಕಾರಿ ಶಶಿಧರ ಕುರೇರ, ಜಿಪಂ ಉಪ ಕಾರ್ಯದರ್ಶಿ ಜಿ. ಗೋವಿಂದಸ್ವಾಮಿ, ಉಪವಿಭಾಗಾಧಿಕಾರಿ ಶಿವರಾಜ, ತಹಸೀಲ್ದಾರ್ ಪಂಪನಗೌಡ ಮೇಲ್ಸೀಮೆ, ಮುಖ್ಯ ಯೋಜನಾಧಿಕಾರಿ ಬಸನಗೌಡ್ರ, ಅಬಕಾರಿ ಇಲಾಖೆಯ ಜಿಲ್ಲಾಧಿಕಾರಿ ನಾಗರಾಜ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಮಲ್ಲೇಶಪ್ಪ ಹೊರಪೇಟೆ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು, ಸಿಬ್ಬಂದಿ ಇದ್ದರು.