ಅಂಬೇಡ್ಕರ್ ಪ್ರತಿಮೆಗೆ ಉದಾಸಿ ಮಾಲಾರ್ಪಣೆ
ಹಾವೇರಿ: ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ 123ನೇ ಜಯಂತಿ ಅಂಗವಾಗಿ ನಗರದ ಅಂಬೇಡ್ಕರ್ ವೃತ್ತದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವಕುಮಾರ ಉದಾಸಿ ಸೋಮವಾರ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.
ಇದಕ್ಕೂ ಮೊದಲು ಅಂಬೇಡ್ಕರ್ ಭಾವಚಿತ್ರಕ್ಕೆ ಕಾಯಿ, ಕರ್ಪೂರ ಬೆಳಗಿ ಪೂಜೆ ಸಲ್ಲಿಸಿದರು. ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಪರ ಜೈಘೋಷ ಕೂಗಿದರು. ವಿಧಾನ ಪರಿಷತ್ ಮಾಜಿ ಸದಸ್ಯ ಶಿವರಾಜ ಸಜ್ಜನರ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ, ಜಿಲ್ಲಾ ವಕ್ತಾರ ಪ್ರಭು ಹಿಟ್ನಳ್ಳಿ, ಯುವ ಮೋರ್ಚಾ ಅಧ್ಯಕ್ಷ ಪ್ರದೀಪ ಮುಳ್ಳೂರ, ಸುರೇಶ ಹೊಸಮನಿ, ಗಿರೀಶ ತುಪ್ಪದ, ಜಗದೀಶ ಮಲಗೋಡ, ವಿಜಯಕುಮಾರ ಚಿನ್ನಿಕಟ್ಟಿ, ಬಾಬುಸಾಬ್ ಮೋಮಿನಗಾರ, ಶ್ರೀಪಾದ ಬೆಟಗೇರಿ ಇತರರು ಇದ್ದರು.
--