ಇಂದು ವಾರ್ಷಿಕ ಸ್ನೇಹ ಸಮ್ಮೇಳನ
ಶಿಗ್ಗಾವಿ: ಪಟ್ಟಣದ ಚನ್ನಪ್ಪ ಕುನ್ನೂರ ಸಮೂಹ ಶಿಕ್ಷಣ ಸಂಸ್ಥೆಗಳ 24ನೇ ವರ್ಷದ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಫೆ. 5ರಂದು ಸಂಜೆ 4ಕ್ಕೆ ಏರ್ಪಡಿಸಲಾಗಿದೆ.
ಸಂಸ್ಥೆಯ ಸಂಸ್ಥಾಪಕ ಮಾಜಿ ಸಂಸದ ಮಂಜುನಾಥ ಕುನ್ನೂರ ಅಧ್ಯಕ್ಷತೆಯಲ್ಲಿ ನಡೆಯುವ ಕಾರ್ಯಕ್ರಮವನ್ನು ಹಾವೇರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಸ್.ಬಿ. ಕೊಡ್ಲಿ ಉದ್ಘಾಟಿಸಲಿದ್ದಾರೆ. ಸಂಸ್ಥೆಯ ಅಧ್ಯಕ್ಷೆ ಸ್ನೇಹಲತಾ ಕುನ್ನೂರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಹಾವೇರಿ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ಚಿನ್ನಿಕಟ್ಟಿ ಬಹುಮಾನ ವಿತರಿಸಲಿದ್ದು, ಸಂಸ್ಥೆಯ ಕಾರ್ಯದರ್ಶಿ ರಾಜು ಎಂ. ಕುನ್ನೂರ ವಿಜ್ಞಾನ ವಸ್ತು ಪ್ರದರ್ಶನವನ್ನು, ಧಾರವಾಡ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣೇಶ ಪೂಜಾರ ರಂಗೋಲಿ ಪ್ರದರ್ಶನವನ್ನು ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ರಂಭಾಪುರಿ ಕಾಲೇಜು ಆಡಳಿತಾಧಿಕಾರಿಗಳಾದ ವಿಶ್ವನಾಥ ಎಸ್. ಕಂಬಾಳಿಮಠ ಹಾಗೂ ಧಾರವಾಡದ ವೈ.ಬಿ. ಅಣ್ಣಿಗೇರಿ, ಶಿಕ್ಷಣ ಸಂಸ್ಥೆಯ ಅಧ್ಯಕ್ಷ ನಾಗೇಶ ವೈ. ಅಣ್ಣಿಗೇರಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಾಚಾರ್ಯ ನಾಗರಾಜ ದ್ಯಾಮನಕೊಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.