10ರಂದು ಅರ್ಚಕರ ಪ್ರತಿಭಟನೆ
ಬ್ಯಾಡಗಿ: ತಾಲೂಕಿನ ಎಲ್ಲ ದೇವಸ್ಥಾನಗಳ ಅರ್ಚಕರಿಗೆ ಕಡ್ಡಾಯವಾಗಿ ಗುರುತಿನ ಚೀಟಿ ನೀಡುವುದು, ಧಾರ್ಮಿಕ ದತ್ತಿ ಇಲಾಖೆಯಿಂದ ನೇರವಾಗಿ ಅರ್ಚಕರಿಗೆ ವರ್ಷಾಸನ ಬಿಡುಗಡೆಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಫೆ. 10ರಂದು ತಾಲೂಕಿನ ಎಲ್ಲ ಅರ್ಚಕರ ನೇತೃತ್ವದಲ್ಲಿ ಪ್ರತಿಭಟನೆ ಜರುಗಲಿದೆ. ಇಲ್ಲಿನ ಸಿದ್ಧೇಶ್ವರ ದೇವಸ್ಥಾನದಿಂದ ಹೊರಡುವ ಪ್ರತಿಭಟನಾ ಮೆರವಣಿಗೆ ತಾಲೂಕಿನ ಎಲ್ಲ ದೇವಸ್ಥಾನಗಳ ಅರ್ಚಕರು ಪಾಲ್ಗೊಳ್ಳುವಂತೆ ಅರ್ಚಕರ ಹಾಗೂ ಆಗಮಿಕರ ಸಂಘದ ಜಿಲ್ಲಾಧ್ಯಕ್ಷ ರುದ್ರಯ್ಯ ಸಾಲಿಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.