ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ರೈತರು ಹೈನುಗಾರಿಕೆಗೆ ಆದ್ಯತೆ ನೀಡಲಿ

Vishwanath S
Updated On : 8 Feb 2014, 12:47 pm

ರಾಣಿಬೆನ್ನೂರು:  ಕೃಷಿ ಚಟುವಟಿಕೆ ಜತೆಯಲ್ಲಿ ಹೈನುಗಾರಿಕೆಗೆ ಆದ್ಯತೆ ನೀಡುವುದರೊಂದಿಗೆ ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ರೈತರು ಮುಂದಾಗಬೇಕೆಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಮಂಜುನಾಥ ಓಲೇಕಾರ ಕರೆ
ನೀಡಿದರು.
ಜಿಲ್ಲಾ ಪಂಚಾಯಿತಿ ಹಾವೇರಿ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ರಾಣಿಬೆನ್ನೂರು, ಗ್ರಾಮ ಪಂಚಾಯಿತಿ ಹಾಗೂ ಹಾಲು ಉತ್ಪಾದಕರ ಸಹಕಾರಿ ಸಂಘ ನದಿಹರಳಹಳ್ಳಿ ಸಂಯುಕ್ತಾಶ್ರಯದಲ್ಲಿ,ನದಿಹರಳಹಳ್ಳಿ ಗ್ರಾಮದ ಪ್ರೌಢ ಶಾಲೆಯ ಆವರಣದಲ್ಲಿ ಏರ್ಪಡಿಸಿದ್ದ ಮಿಶ್ರತಳಿ ರಾಸುಗಳ ಪ್ರದರ್ಶನ ಹಾಗೂ ಉತ್ತಮ ರಾಸುಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಐರಣಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರತ್ನಮ್ಮ ಬಸವನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಪಶುವೈದ್ಯ ಸೇವಾ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ. ಪರಮೇಶ ಎನ್. ಹುಬ್ಬಳ್ಳಿ ಮಾತನಾಡಿ, ಹಸು, ಎಮ್ಮೆಗಳಿಗೆ ಕೆಎಲ್‌ಡಿಎ ವಿಮೆ ಮತ್ತು ಹೈನುಗಾರಿಕೆಯ ಸಾಲ, ಸಹಾಯಧನ ಸೇರಿದಂತೆ ಇಲಾಖೆಯ ವಿವಿಧ ಲಸಿಕಾ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು.
ಮಿಶ್ರತಳಿ ರಾಸುಗಳಿಗೆ ಪಶು ವೈದ್ಯರಾದ ಡಾ. ರಾಘವೇಂದ್ರ ಕಿತ್ತೂರು, ಡಾ. ರವಿದಾಸರ, ಡಾ. ಸೈಯದ್ ಮುದಾಶೀರಅಹ್ಮದ. ಡಾ. ಮಹ್ಮದ ಆರಿಫ್, ಡಾ. ರಾಘವೇಂದ್ರ ಬೇವಿನಹಳ್ಳಿ, ಡಾ. ಗಂಗಾಧರ ಸುತ್ತೆ, ಡಾ. ಮಂಜುನಾಥ ಸುಕ್ತೆ ಚಿಕಿತ್ಸೆ ನೀಡಿ ಬಹುಮಾನಕ್ಕಾಗಿ ಆಯ್ಕೆ ಮಾಡಿದರು. ಜಾನುವಾರುಗಳಿಗೆ ಬಹುಮಾನ ವಿತರಿಸಲಾಯಿತು. ತಾಲೂಕು ಪಂಚಾಯಿತಿ ಸದಸ್ಯೆ ಗೀತಾ ಹಿತ್ತಲಮನಿ, ಗ್ರಾಪಂ ಉಪಾಧ್ಯಕ್ಷರಾದ ಬಸಪ್ಪ ಕಟ್ಟಿಮನಿ, ಜಿಲ್ಲಾ ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆಯ ಉಪನಿರ್ದೇಶಕರಾದ ಡಾ. ಎಸ್.ಜಿ. ಕೋನಾಪುರ, ತಾಪಂ ಕಾರ್ಯನಿರ್ವಹಣಾಧಿಕಾರಿ ಕೆ. ಕೃಷ್ಣಮೂರ್ತಿ, ಹಾಲು ಉತ್ಪಾದಕರಾದ ಹಾಗೂ ಸಂಘದ ಅಧ್ಯಕ್ಷ ಹನುಮಂತಪ್ಪ ಪೂಜಾರ, ಮುಖಂಡರಾದ ಹನುಮಂತಗೌಡ ಪಾಟೀಲ, ಚಂದ್ರಣ್ಣ ಬೇಡರ ಹಾಗೂ ಗ್ರಾಪಂ ಸರ್ವ ಸದಸ್ಯರು, ಕೃಷಿ ವಿಜ್ಞಾನ ಕೇಂದ್ರದ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಕುಮಾರ ಮುಕರ್ತಿಹಾಳ ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement