ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನಾಳೆ ನಾಡೋಜ ಹಂಪನಾಗೆ ಪ್ರಶಸ್ತಿ ಪ್ರದಾನ

Rashmi Kasaragodu
Updated On : 11 Feb 2014, 11:29 am

ಹಾವೇರಿ: ಜೈನ ಧರ್ಮದಲ್ಲಿ ವಿಶೇಷ ಅಧ್ಯಯನ ಮಾಡಿದ ಸಾಧನೆಗಾಗಿ ಅಟ್ಲಾಂಟದ ಜೈನ್ ವರ್ಲ್ಡ್ ಫೌಂಡೇಶನ್ರವರು ನಾಡೋಜ ಡಾ. ಹಂ.ಪ. ನಾಗರಾಜಯ್ಯ ಅವರಿಗೆ ಜಿವೆಲ್ ಆಫ್ ಜೈನ್ ವರ್ಲ್ಡ್ ಪ್ರಶಸ್ತಿಯನ್ನು ನೀಡಿದ್ದು, ಪ್ರಶಸ್ತಿ ಪ್ರದಾನ ಸಮಾರಂಭ ಫೆ. 12ರಂದು ಮಧ್ಯಾಹ್ನ 2 ಗಂಟೆಗೆ ನಗರದ ಶಿವಬಸವೇಶ್ವರ ಕಲ್ಯಾಣ ಮಂಟಪದಲ್ಲಿ ನಡೆಯಲಿದೆ ಎಂದು ಮುನಿಶ್ರೀ 108 ಪುಣ್ಯಸಾಗರ ಮಹಾರಾಜರು ತಿಳಿಸಿದರು. ನಗರದ ದಿಗಂಬರ ಜೈನ ಮಂದಿರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಶಸ್ತಿಯು ತಾಮ್ರದ ಪತ್ರ, ನಗದು ಹೊಂದಿದೆ. ಹಂಪಿ ಕನ್ನಡ ವಿವಿ ಕುಲಪತಿ ಪ್ರೊ. ಹಿ.ಚ. ಬೋರಲಿಂಗಯ್ಯ ಪ್ರಶಸ್ತಿ ಪ್ರದಾನ ಮಾಡುವರು. ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ, ಪುಣ್ಯಸಾಗರ ಮಹಾರಾಜರು ಸಾನ್ನಿಧ್ಯ ವಹಿಸುವರು. ಕಸಾಪ ರಾಜ್ಯಾಧ್ಯಕ್ಷ ಪುಂಡಲೀಕ ಹಾಲಂಬಿ ಅಧ್ಯಕ್ಷತೆ ವಹಿಸುವರು. ಶಾಸಕರಾದ ಬಸವರಾಜ ಬೊಮ್ಮಾಯಿ, ಸಂಜಯ ಪಾಟೀಲ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement