ನಾಳೆ ನಲಿ-ಕಲಿ ಶಿಕ್ಷಕರ ಸಮಾವೇಶ
ಬ್ಯಾಡಗಿ: ಕ್ಷೇತ್ರ ಶಿಕ್ಷಣಾಧಿಕಾರಿಗಳವರ ಕಾರ್ಯಾಲಯ ಮತ್ತು ಸರ್ವ ಶಿಕ್ಷಣ ಅಭಿಯಾನ ಇವರ ಆಶ್ರಯದಲ್ಲಿ ಫೆ. 20ರಂದು ಬೆಳಗ್ಗೆ 10.30ಕ್ಕೆ ತಾಲೂಕಿನ ಬೀರನಕೊಪ್ಪ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಯಲು ರಂಗಮಂದಿರದಲ್ಲಿ ಬ್ಯಾಡಗಿ ತಾಲೂಕು ಮಟ್ಟದ ನಲಿ-ಕಲಿ ಶಿಕ್ಷಕರ ಸಮಾವೇಶ ನಡೆಯಲಿದೆ. ಮಡ್ಲೂರು ಮುರುಘಾಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು ಎಸ್.ಡಿ.ಎಂ.ಸಿ. ಅಧ್ಯಕ್ಷ ಉಮೇಶ ಸೊಪ್ಪೆರ ಅಧ್ಯಕ್ಷತೆ ವಹಿಸುವರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಎಸ್.ಬಿ. ಕೊಡ್ಲಿ ಡಯಟ್ ಪ್ರಾಚಾರ್ಯ ಎಂ.ಡಿ. ಬಳ್ಳಾರಿ, ಜಿಲ್ಲಾ ಉಪಸಮನ್ವಯಾಧಿಕಾರಿ ಎಚ್.ಎಂ. ಖಾನ್ ಅತಿಥಿಗಳಾಗಿ ಉಪಸ್ಥಿತರಿರುವರು. ಮಾಜಿ ಸೈನಿಕ ಎಂ.ಡಿ. ಚಿಕ್ಕಣ್ಣವರ ಶಿಕ್ಷಕರಿಗಾಗಿ ಧನಾತ್ಮಕತೆ ಚಿಂತನೆ ಕುರಿತು ಹಾಗೂ ಸಂಪನ್ಮೂಲ ವ್ಯಕ್ತಿ ಕೆ.ಎಲ್. ಬಾಸೂರ ಉಪನ್ಯಾಸ ನೀಡಲಿದ್ದಾರೆ. ಶಿಕ್ಷಣ ಜಾಗೃತಿ ಕುರಿತಾದ ಬೀದಿ ನಾಟಕ ಇದೇ ಸಂದರ್ಭದಲ್ಲಿ ಪ್ರದರ್ಶನನಗೊಳ್ಳಲಿದ್ದು, ತಾಲೂಕಿನ ನಲಿಕಲಿ ಶಿಕ್ಷಕರು, ಎಸ್ಡಿಎಂಸಿ ಪದಾಧಿಕಾರಿಗಳು, ಪೋಷಕರು ಹಾಗೂ ತಾಯಂದಿರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಸನ್ನಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.