28ರಂದು ಸುಗ್ಗಿ-ಹುಗ್ಗಿ ಜಾನಪದ ಕಾರ್ಯಕ್ರಮ
ಹಾವೇರಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಸುಗ್ಗಿ-ಹುಗ್ಗಿ ಜಾನಪದ ಕಾರ್ಯಕ್ರಮ ಫೆ. 28ರಂದು ಬೆಳಗ್ಗೆ 11ಕ್ಕೆ ನಗರದ ಜಿಲ್ಲಾ ಗುರುಭವನದಲ್ಲಿ ಜರುಗಲಿದೆ.
ಇದಕ್ಕೂ ಮೊದಲು ಅಂದು ಬೆಳಗ್ಗೆ 10ಕ್ಕೆ ನಗರದ ಪುರಸಿದ್ದೇಶ್ವರ ದೇವಸ್ಥಾನದಿಂದ ನಿಬ್ಬಣ ಜಾನಪದ ಕಲಾತಂಡಗಳ ಮೆರವಣಿಗೆ ಹೊರಡಲಿದೆ. ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಡಾ. ಅಂಬಳಿಕೆ ಹಿರಿಯಣ್ಣ ಅವರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಪ್ರಕಾಶ ಹುಕ್ಕೇರಿ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕ ರುದ್ರಪ್ಪ ಲಮಾಣಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ ಜೋಶಿ, ಶಾಸಕರಾದ ಕೆ.ಬಿ. ಕೋಳಿವಾಡ, ಮನೋಹರ ತಹಶೀಲ್ದಾರ, ಬಸವರಾಜ ಶಿವಣ್ಣನವರ, ಬಸವರಾಜ ಬೊಮ್ಮಾಯಿ, ಯು.ಬಿ. ಬಣಕಾರ, ವಿಧಾನ ಪರಿಷತ್ ಸದಸ್ಯರಾದ ಬಸವರಾಜ ಹೊರಟ್ಟಿ, ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ನಾಗರಾಜ ಛಬ್ಬಿ, ಜಿಪಂ ಅಧ್ಯಕ್ಷ ರಾಜೇಂದ್ರ ಹಾವೇರಣ್ಣನವರ, ನಗರಸಭೆ ಅಧ್ಯಕ್ಷ ಐ.ಯು. ಪಠಾಣ. ಜಿಪಂ ಉಪಾಧ್ಯಕ್ಷೆ ಶೋಭಾ ನಿಸ್ಸೀಮಗೌಡ್ರ, ನಗರಸಭೆ ಉಪಾಧ್ಯಕ್ಷೆ ರತ್ನಾ ಭೀಮಕ್ಕನವರ, ಜಿಪಂ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಸರೋಜವ್ವ ಆಡಿನ, ತಾಪಂ ಅಧ್ಯಕ್ಷೆ ಲಕ್ಷ್ಮವ್ವ ಮೇಲ್ಮುರಿ, ಉಪಾಧ್ಯಕ್ಷ ಪ್ರಕಾಶ ಬಣಕಾರ, ಜಿಲ್ಲಾಧಿಕಾರಿ ಎಂ. ಮಂಜುನಾಥ ನಾಯಕ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ಶಶಿಕುಮಾರ್, ಜಿಪಂ ಸಿಇಒ ಕೆ.ಬಿ. ಆಂಜನಪ್ಪ ಭಾಗವಹಿಸುವರು. ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ರಾಣಿಬೆನ್ನೂರಿನ ಕೆ.ಸಿ. ನಾಗರಜ್ಜಿ ಹಾಗೂ ಹಾನಗಲ್ಲನ ಡಾ. ಆನಂದಪ್ಪ ಬಿ.ಎಚ್. (ಜೋಗಿ) ಅವರು ಅತಿಥಿ ಉಪನ್ಯಾಸಕರಾಗಿ ಪಾಲ್ಗೊಳ್ಳುವರೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.