ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಮತದಾರರ ದಾರಿ ತಪ್ಪಿಸುತ್ತಿರುವ ಕಾಂಗ್ರೆಸ್

Vishwanath S
Updated On : 26 Feb 2014, 11:16 am

ಗುತ್ತಲ: ಜಾತಿ ವಿಷದ ಬೀಜ ಬಿತ್ತಿ ಮತದಾರರನ್ನು ದಾರಿ ತಪ್ಪಿಸುವ ಕಾರ್ಯವನ್ನು ದೇಶ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್ ನಿರಂತರ ಮಾಡುತ್ತಾ ಬಂದಿದೆ ಎಂದು ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ವಿರುದ್ಧ ದಾಳಿ ನಡೆಸಿದರು.
ಹೊಸರಿತ್ತಿಯ ಗುದ್ಲೆಪ್ಪ ಹಳ್ಳಿಕೇರಿ ಕಾಲೇಜು ಮೈದಾನದಲ್ಲಿ ಮಂಗಳವಾರ ಏರ್ಪಡಿಸಿದ್ದ ಭಾರತ ಗೆಲ್ಲಿಸಿ ಕಾರ್ಯಕರ್ತರ ಸಮಾವೇಶ ಉದ್ಘಾಟಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ತಮ್ಮ 2ನೇ ಬಜೆಟ್‌ನಲ್ಲಿ ರೈತರ ಪರ ಯಾವುದೇ ಯೋಜನೆಗಳನ್ನು ಜಾರಿ ಗೊಳಿಸದಿರುವುದು ವಿಷಾದದ ಸಂಗತಿ ಎಂದರು.
ಮಾಜಿ ಸಚಿವ ಸಿ.ಎಂ. ಉದಾಸಿ, ಕಾಂಗ್ರೆಸ್ ಸರ್ಕಾರ ಕೇವಲ ಬಾಯಿ ಬಡಾಯಿ ಎಂದ ಅವರು, ಈ ಸರ್ಕಾರದಿಂದ ಅಭಿವೃದ್ಧಿ ನೆಪದಲ್ಲಿ ಏನನ್ನೂ ನಿರೀಕ್ಷಿಸಲು ಸಾಧ್ಯವಿಲ್ಲ. ಜನರಲ್ಲಿ ಕೇವಲ ಭ್ರಮೆ ಹುಟ್ಟಿಸುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ಬಜೆಟ್‌ನ ಮುಖವಾಡ ತೋರಿಸಿ ಮತದಾರರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದರು.
ಸಂಸದ ಶಿವಕುಮಾರ ಉದಾಸಿ ಮಾತನಾಡಿದರು. ಮಾಜಿ ಶಾಸಕ ನೆಹರು ಓಲೇಕಾರ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಭೋಜರಾಜ ಕರೂದಿ, ಮಾಜಿ ಸಚಿವ ಬಸವರಾಜ ಬೊಮ್ಮಾಯಿ, ವಿಪ ಮಾಜಿ ಸದಸ್ಯ ಶಿವರಾಜ ಸಜ್ಜನರ, ಈರಣ್ಣ ಪರಂಗಿ, ಸಿದ್ಧರಾಜ ಕಲಕೋಟಿ, ರಾಜೇಂದ್ರ ಹಾವೇರಣ್ಣನವರ, ಮಲ್ಲೇಶಪ್ಪ ಹರಿಜನ, ಬಿ.ಜಿ. ಗೌರಿಮನಿ, ಭಾರತಿ ಜಂಬಗಿ, ಕೆ.ಸಿ. ಕೋರಿ ಇತರರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement