ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕ್ರೀಡೆ ಜೀವನಕ್ಕೆ ಸ್ಫೂರ್ತಿ: ಇನಾಮತಿ

Lingaraj Badiger
Updated On : 2 Jan 2014, 12:33 pm

ಕನ್ನಡಪ್ರಭ ವಾರ್ತೆ, ಶಿಗ್ಗಾಂವಿ, ಜ. 1
ಕ್ರೀಡಾ ಚಟುವಟಿಕೆ ಮನುಷ್ಯನ ಜೀವನದಲ್ಲಿ ಸ್ಫೂರ್ತಿ ಹೆಚ್ಚಿಸುತ್ತವೆ. ಸ್ಪರ್ಧೆಗಳನ್ನು ಕ್ರೀಡಾ ಮನೋಭಾವದಿಂದ ನೋಡಬೇಕು ಎಂದು ಜಿಪಂ ಸದಸ್ಯ ಬಿ.ಟಿ. ಇನಾಮತಿ ಹೇಳಿದರು.
ಬಸನಾಳ ಆಂಜನೇಯ ಸದ್ಭಕ್ತ ಮಂಡಳಿ ಆಯೋಜಿಸಿದ ಐದನೇ ವರ್ಷದ ಪಗಡಾ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು. ಕಾಶಯ್ಯನವರು ಚಿಕ್ಕಮಠ ಸಾನ್ನಿಧ್ಯ ವಹಿಸಿದ್ದರು. ಗ್ರಾಪಂ ಅಧ್ಯಕ್ಷ ಶಿವಕುಮಾರ ಬಿಜಾಪುರ ಅಧ್ಯಕ್ಷತೆ ವಹಿಸಿದ್ದರು. ಕೆಸಿಸಿ ಬ್ಯಾಂಕ್ ನಿರ್ದೇಶಕ ಗಂಗಣ್ಣ ಸಾತಣ್ಣನವರ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ರವೀಂದ್ರ ಕುಡವಕ್ಕಲಿಗೇರ, ಬಿಜೆಪಿ ಅಧ್ಯಕ್ಷ ದೇವಣ್ಣ ಚಾಕಲಬ್ಬಿ, ಕೆಎಂಎಫ್ ನಿರ್ದೇಶಕ ವಿರೂಪಾಕ್ಷಪ್ಪ ಬಿಜಾಪುರ, ಬಸವರಾಜ ಬಿಜಾಪುರ ಇದ್ದರು. ನಿಂಗನಗೌಡ ಪಾಟೀಲ ನಿರೂಪಿಸಿ, ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement