ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಗುಣಮಟ್ಟದ ಸಂಶೋಧನೆಗೆ ಆದ್ಯತೆ

Lingaraj Badiger
Updated On : 3 Jan 2014, 12:31 pm

ಕನ್ನಡಪ್ರಭ ವಾರ್ತೆ, ಹಾವೇರಿ, ಜ. 2
ಸಂಶೋಧನೆಯ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಯುಜಿಸಿ ನಿಯಮಾವಳಿ ಪ್ರಕಾರ ಸಂಶೋಧನಾ ಕಮ್ಮಟವನ್ನು ಆಯೋಜಿಸುತ್ತಿದೆ ಎಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ಕುಲಪತಿ ಪ್ರೊ೤ ಅಂಬಳಿಕೆ ಹಿರಿಯಣ್ಣ ಹೇಳಿದರು.
ಶಿಗ್ಗಾಂವಿ ತಾಲೂಕಿನ ಗೊಟಗೋಡಿಯಲ್ಲಿರುವ ಕರ್ನಾಟಕ ಜಾನಪದ ವಿಶ್ವವಿದ್ಯಾಲಯದ ನಡುಮನೆ ಸಭಾಂಗಣದಲ್ಲಿ ಪ್ರಸಕ್ತ ಸಾಲಿನ ಪಿಎಚ್‌ಡಿ ಸಂಶೋಧನಾ ಕಮ್ಮಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಾಮಾಜಿಕ ಸಂಶೋಧನೆಯ ಗುಣಮಟ್ಟ ಕುಸಿಯುತ್ತಿದೆ ಎಂಬ ಹೇಳಿಕೆಗಳು ಚಾಲ್ತಿಯಲ್ಲಿರುವ ಈ ಹೊತ್ತಿನಲ್ಲಿ ಯುಜಿಸಿ ಸಂಶೋಧನೆಯನ್ನು ಗಂಭೀರವಾಗಿ ಪರಿಗಣಿಸಿ, ವಿದ್ಯಾರ್ಥಿಗಳಿಗೆ ಕೋರ್ಸ್‌ವರ್ಕ್ ಕಡ್ಡಾಯಗೊಳಿಸಿದೆ. ವಿವಿ ಗುಣಮಟ್ಟದ ಸಂಶೋಧನೆ ಕೈಗೊಳ್ಳಲು ಸೂಕ್ತ ತರಬೇತಿ ನೀಡುವ ಮೂಲಕ ಸಮಾಜಕ್ಕೆ ಉತ್ತಮ ಸಂಶೋಧಕರನ್ನು ಕೊಡುಗೆಯಾಗಿ ನೀಡುವಲ್ಲಿ ಪ್ರಾಮಾಣಿಕವಾಗಿ ತೊಡಗಿಸಿಕೊಂಡಿದೆ ಎಂದು ತಿಳಿಸಿದರು. ಬಳಿಕ ಜಾನಪದ ಅಧ್ಯಯನ ಸಿದ್ಧಾಂತಗಳ ಉಗಮದ ಕುರಿತು ಮೌಲಿಕ ಉಪನ್ಯಾಸ ನೀಡಿದರು.
ಮೌಲ್ಯಮಾಪನ ಕುಲಸಚಿವ ಪ್ರೊ೤ ಸ.ಚಿ. ರಮೇಶ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಸಂಶೋಧನೆ ವ್ಯಕ್ತಿನಿಷ್ಠವಾಗಿರಬಾರದು, ಸಮಾಜನಿಷ್ಠವಾಗಿರಬೇಕು. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಎಚ್ಚರಿಕೆ ವಹಿಸಬೇಕು. ವಿವಿ ಆಯೋಜಿಸಿದ ಸಂಶೋಧನಾ ಕಮ್ಮಟದ ಪ್ರಯೋಜನವನ್ನು ಪೂರ್ಣವಾಗಿ ಪಡೆದುಕೊಳ್ಳಬೇಕು ಎಂದರು.
ಕೋರ್ಸ್‌ವರ್ಕ್‌ನ ಸ್ವರೂಪ ಕುರಿತು ಮಾತನಾಡಿದ ಎಂಬಿಎ ವಿಭಾಗದ ಮುಖ್ಯಸ್ಥ, ಡೀನ್ ಪ್ರೊ೤ ಎಂ. ಚಂದ್ರ ಪೂಜಾರಿ, ಸಂಶೋಧನೆ ಸಾಮಾಜಿಕ ಜವಾಬ್ದಾರಿಯಾಗಿದ್ದು, ಸಮಾಜದ ವಿಮರ್ಶೆ ಜತೆಗೆ ಆತ್ಮವಿಮರ್ಶೆ ಉದ್ದೇಶವೂ ಇರುತ್ತದೆ ಎಂದರು. ಕುಲಸಚಿವ ಪ್ರೊ೤ ಡಿ.ಬಿ. ನಾಯಕ ಇದ್ದರು.
ಎನ್. ಮೋಹನಕುಮಾರ್ ಪ್ರಾರ್ಥಿಸಿದರು. ಯೋಜನಾ ಸಹಾಯಕ ಸಂಗಮೇಶ ಗಣಿ ನಿರೂಪಿಸಿದರು. ಸಂಶೋಧನಾ ವಿದ್ಯಾರ್ಥಿ ಜಯದತ್ ಎಸ್. ವಂದಿಸಿದರು. ವಿವಿ ಹಿರಿಯ ಸಂಶೋಧನಾ ಅಧಿಕಾರಿ ಡಾ೤ ಕೆ. ಪ್ರೇಮಕುಮಾರ, ಸಂದರ್ಶಕ ಪ್ರಾಧ್ಯಾಪಕ ಡಾ೤ ಕೆ. ಕಮಲಾಕ್ಷ ಹಾಗೂ ಸಂಶೋಧನಾ ವಿದ್ಯಾರ್ಥಿಗಳು ಹಾಜರಿದ್ದರು. ಮಧ್ಯಾಹ್ನದ ಅವಧಿಯಲ್ಲಿ ಕುಲಸಚಿವ ಪ್ರೊ೤ ಡಿ.ಬಿ. ನಾಯಕ ಹಾಗೂ ಎಂಬಿಎ ವಿಭಾಗದ ಮುಖ್ಯಸ್ಥ ಪ್ರೊ೤ ಎಂ. ಚಂದ್ರ ಪೂಜಾರಿ ವಿಶೇಷ ಉಪನ್ಯಾಸ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement