ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ವಿದ್ಯಾರ್ಥಿನಿ ಅತ್ಯಾಚಾರ: ಎಸ್‌ಎಫ್‌ಐ ಪ್ರತಿಭಟನೆ

Lingaraj Badiger
Updated On : 3 Jan 2014, 12:35 pm

ಕನ್ನಡಪ್ರಭ ವಾರ್ತೆ, ಹಾವೇರಿ, ಡಿ. ಜ. 2
ಹುಬ್ಬಳ್ಳಿ ಸಮೀಪದ ಬುಡರಸಂಗಿ ಗ್ರಾಮದ ವಿದ್ಯಾರ್ಥಿನಿಯನ್ನು ಅಪಹರಿಸಿ ಹಾವೇರಿ ಹತ್ತಿರದ ನೆಲೋಗಲ್ ಬಳಿ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿದ ಪೈಶಾಚಿಕ ಕೃತ್ಯವನ್ನು ಹಾಗೂ ಗಣಜೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅಮಾನವೀಯ ಘಟನೆಯನ್ನು ಖಂಡಿಸಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಗುರುವಾರ ವಿದ್ಯಾರ್ಥಿನಿಯರು ಇಜಾರಿಲಕಮಾಪುರದ ದುಂಡಿಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.
ಅತ್ಯಾಚಾರಿಗಳನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ಘೋಷಣೆ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಹಾರ ಮಾತನಾಡಿ, ವಿದ್ಯಾರ್ಥಿನಿಯ ಮೇಲೆ ಕಾಮುಕರು ಸಾಮೂಹಿಕ ಅತ್ಯಾಚಾರ ನಡೆಸಿರುವುದು ಹೇಯ ಕೃತ್ಯ. ಕಾಮುಕರನ್ನು ಬಂಧಿಸಬೇಕಾದ ಪೊಲೀಸರು, ವಿದ್ಯಾರ್ಥಿನಿಯ ತಂದೆ ದೂರು ನೀಡಲು ಹೋದರೆ ಪ್ರಕರಣ ದಾಖಲಿಸಿಕೊಳ್ಳದೆ ಬೇಜವಾಬ್ದಾರಿಯಾಗಿ ವರ್ತಿಸಿದ್ದಾರೆ. ಇಂತಹ ಘಟನೆಗಳಿಂದಾಗಿ ಎಷ್ಟೋ ಪ್ರಕರಣಗಳು ಬೆಳಕಿಗೇ ಬರುವುದಿಲ್ಲ. ಆರೋಪಿಗಳು ತಪ್ಪಿಸಿಕೊಳ್ಳಲು ಅವಕಾಶ ಒದಗಿಸಿದಂತಾಗುತ್ತದೆ. ನೊಂದವರಿಗೆ ನ್ಯಾಯ ಸಿಗಲು ಇನ್ನು ಮುಂದಾದರೂ ಪೊಲೀಸ್ ಇಲಾಖೆ ಎಚ್ಚೆತ್ತುಕೊಳ್ಳುವುದು ಅವಶ್ಯವಾಗಿದೆ. ಕಾಮುಕರನ್ನು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು. ಅತ್ಯಾಚಾರಕ್ಕೆ ಒಳಗಾದ ವಿದ್ಯಾರ್ಥಿನಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾಧ್ಯಕ್ಷ ಬಸವರಾಜ ಪೂಜಾರ ಮಾತನಾಡಿ, ಅತ್ಯಾಚಾರ, ದೌರ್ಜನ್ಯ ಪ್ರಕರಣಗಳು ಆಗಾಗ ನಡೆಯುತ್ತಿದ್ದು, ಪೋಷಕರು ಹಾಗೂ ವಿದ್ಯಾರ್ಥಿನಿಯರಲ್ಲಿ ಭಯದ ವಾತಾವರಣ ಉಂಟು ಮಾಡುತ್ತಿವೆ. ಅತ್ಯಾಚಾರಿಗಳಿಗೆ ಉಗ್ರ ಶಿಕ್ಷೆ ನೀಡಬೇಕು ಎಂದು ಆಗ್ರಹಿಸಿದರು.
ಮಲ್ಲಿಕಾರ್ಜುನ ಹಿರೇಮಠ, ಪ್ರಸನ್ನ ಹಿರೇಮಠ, ಮಹಮದ್ ರಫೀಕ್ ನದಾಫ, ಪ್ರತೀಕ ಗುತ್ತಲ, ಇಮಾಮ ನದಾಫ್, ಶೀತಲಕುಮಾರ, ವಾಣಿ, ಸುಮಾ, ಸರಸ್ವತಿ ಮಲ್ಲಾಡದ, ಪವಿತ್ರಾ ಮತ್ತಿಹಳ್ಳಿ, ಭಾಗ್ಯಾ ಹಾವೇರಿ, ಅನಿತಾ ದೈವಜ್ಞ, ಪೂಜಾ ಅಗಸಿಬಾನಿ, ಪೂಜಾ ಕಮತರ, ರೋಶನಿ ಅಣ್ಣಿಗೇರಿ, ಚಂದ್ರು ಶಂಕ್ರಪ್ಪನವರ, ನವೀನ ಸಾಸನೂರ, ಸುರೇಶ ಗಾಣಿಗೇರ, ಮಂಜುನಾಥ ಬಾಳಕ್ಕನವರ, ವಿನಾಯಕ ಆಲೂರ, ದರ್ಶನ ಉಪಾಸಿ, ಅನವೀನ ದೊಡ್ಡಣ್ಣವರ, ರಾಜು ಚನ್ನೂರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement