ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಅನ್ಯಾಯ ವಿರುದ್ಧ ಹೋರಾಟದ ಧ್ವನಿ ಕ್ಷೀಣಿಸುತ್ತಿದೆ: ಶ್ರೀನಿವಾಸ

Mainashree
Updated On : 11 Jan 2014, 11:45 am

ಹಾವೇರಿ: ಇಂದು ಅನ್ಯಾಯದ ವಿರುದ್ಧ ಹೋರಾಡುವ ಧ್ವನಿಗಳು ಕ್ಷೀಣಿಸುತ್ತಿರುವುದರಿಂದಲೇ ಸಮಾಜದಲ್ಲಿ ಮೇಲಿಂದ ಮೇಳೆ ಮಹಿಳೆಯರ ಮೇಲೆ ಅತ್ಯಾಚಾರಗಳು ಹಾಗೂ ದೌರ್ಜನ್ಯಗಳು ಹೆಚ್ಚಾಗುತ್ತಿವೆ ಎಂದು ಸಾಹಿತಿ ಬಿ. ಶ್ರೀನಿವಾಸ ಹೇಳಿದರು. ನಗರದ ನಿವೃತ್ತ ನೌಕರರ ಭವನದಲ್ಲಿ ಶುಕ್ರವಾರ ನಡೆದ ಎಸ್‌ಎಫ್‌ಐ 6ನೇ ತಾಲೂಕು ಮಟ್ಟದ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಸ್ತ್ರೀಯನ್ನು ದೇವರೆಂದು ಪೂಜಿಸುವ ನಾಡಿನಲ್ಲಿ ಅವರ ಮೇಲೆ ಅತ್ಯಾಚಾರ ನಡೆಯುವುದು ದುರಂತದ ಸಂಗತಿ ಎಂದ ಅವರು, ಮಹಿಳೆಯರು ಸ್ವರಕ್ಷಣೆಗೆ ಸಂಘಟಿತಕರಾಗಿ ಅನ್ಯಾಯದ ವಿರುದ್ಧ ಹೋರಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು. ಎಸ್‌ಎಫ್‌ಐ ರಾಜ್ಯ ಮುಖಂಡ ಅಮರೇಶ ಕಡಗದ ಮಾತನಾಡಿ, ಸರ್ಕಾರ ಸೈಕಲ್, ಬಟ್ಟೆ, ಪಠ್ಯಪುಸ್ತಕ, ಬಿಸಿಯೂಟ, ಹಾಲು ಸೇರಿದಂತೆ ಹಲವು ಯೋಜನೆ ಜಾರಿಗೆ ತಂದರೂ  ಸರ್ಕಾರಿ ಶಾಲೆಗಳು ಗುಣಮಟ್ಟದ ಶಿಕ್ಷಣ ನೀಡುವಲ್ಲಿ ವಿಫಲವಾಗಿದೆ ಎಂಬುದು ಖಾಸಗಿ ಎನ್‌ಜಿಓ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ. ಇದು ಸರ್ಕಾರದ ಗಮನಕ್ಕೆ ಬಂದರೂ ಕೂಡ ಕಣ್ಮುಚ್ಚಿ ಕುಳಿತಿದೆ ಎಂದು ದೂರಿದರು. ಸಿಐಟಿಯು ಜಿಲ್ಲಾ ಸಂಚಾಲಕ ನಾರಾಯಣ ಕಾಳೆ ಮಾತನಾಡಿದರು. ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಬಸವರಾಜ ಪೂಜಾರ, ಉಪಾಧ್ಯಕ್ಷ ಸುಭಾಷ್ ಎಂ., ಜಿಲ್ಲಾ ಕಾರ್ಯದರ್ಶಿ ರೇಣುಕಾ ಕಹಾರ, ತಾಲೂಕು ಘಟಕದ ಅಧ್ಯಕ್ಷ ಬಸವರಾಜ ಬಾರ್ಕಿ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement