ನಾಳೆ ಸಿದ್ದರಾಮೇಶ್ವರ ಜಯಂತಿ
ರಾಣಿಬೆನ್ನೂರು: ತಾಲೂಕು ಆಡಳಿತ, ತಾಪಂ, ನಗರಸಭೆ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಆಶ್ರಯದಲ್ಲಿ ಜ. 13ರಂದು ಬೆಳಗ್ಗೆ 11 ಗಂಟೆಗೆ ತಾಪಂ ಸಭಾಭವನದಲ್ಲಿ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ ಆಚರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಶಾಸಕ ಕೆ.ಬಿ. ಕೋಳಿವಾಡ ಅಧ್ಯಕ್ಷತೆಯಲ್ಲಿ ತಾಪಂ ಅಧ್ಯಕ್ಷೆ ಹೂವಕ್ಕ ನಾಗೂರು ಉದ್ಘಾಟಿಸುವರು. ನಗರಸಭೆಯ ಪ್ರಭಾರ ಅಧ್ಯಕ್ಷ ಶಿವಪ್ಪ ಮಣೇಗಾರ, ತಾಪಂ ಉಪಾಧ್ಯಕ್ಷ ಗಣೇಶಪ್ಪ ಬಿಲ್ಲಾಳ, ಎಪಿಎಂಸಿ ಅಧ್ಯಕ್ಷ ನಂದೆಪ್ಪ ತೆಗ್ಗಿನ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಚಂದ್ರಗೌಡ ಪಾಟೀಲ, ಟಿಎಪಿಎಂಎಸ್ ಅಧ್ಯಕ್ಷ ಹನುಮಂತಗೌಡ ಮುಡದ್ಯಾವಣ್ಣನವರ, ಜಿಪಂ ಮಾಜಿ ಅಧ್ಯಕ್ಷ ಮಂಜುನಾಥ ಓಲೇಕಾರ, ಶಿವಕುಮಾರ ಮುದ್ದಪ್ಪಳವರ, ಸಂತೋಷ ಪಾಟೀಲ, ಜ್ಯೋತಿ ರಾಮಲಿಂಗಣ್ಣನವರ, ಮಂಜುಳಾ ಅಂಬಲಿ, ಲಲಿತಾ ಜಾಧವ, ತಾಲೂಕು ನೊಳಂಬ ವೀರಶೈವ ಸಮಾಜದ ಅಧ್ಯಕ್ಷ ವಿ.ಎನ್. ಶಾಂತನವರ, ತಹಸೀಲ್ದಾರ್ ಹನುಮಂತಪ್ಪ ಬಡದಾಳ, ತಾಪಂ ಇಒ ಕೆ. ಕೃಷ್ಣಮೂರ್ತಿ, ಡಿವೈಎಸ್ಪಿ ಎಸ್.ಎಸ್. ಗಡಾದ, ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಲಕ್ಷ್ಮಣ, ನಗರಸಭೆ ಪೌರಾಯುಕ್ತೆ ಬಿ.ಎಂ. ಅಶ್ವಿನಿ ಆಗಮಿಸುವರು. ರಾಷ್ಟ್ರ ಪ್ರಶಸ್ತಿ ಪುರಸ್ಕೃತ ನಿವೃತ್ತ ಶಿಕ್ಷಕ ಎಂ.ಬಿ. ಹುಲಗಣ್ಣನವರ, ನ್ಯಾಯವಾದಿ ಆರ್.ಜಿ. ಪಾಟೀಲರು ಶಿವಯೋಗಿ ಸಿದ್ದರಾಮೇಶ್ವರರ ಕುರಿತು ಉಪನ್ಯಾಸ ನೀಡುವರು.