ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ನಿತ್ಯಾನಂದ ಸ್ವಾಮಿ ವಿರುದ್ಧ ಕರವೇ ಆಕ್ರೋಶ

Rashmi Kasaragodu
Updated On : 19 Jan 2014, 12:14 pm


ರಾಣಿಬೆನ್ನೂರು: ಕನ್ನಡಿಗರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಬೆಳಗಾವಿ ಶಾಸಕ ಸಂಭಾಜಿ ಪಾಟೀಲ ಹಾಗೂ ಬಿಡದಿಯ ನಿತ್ಯಾನಂದ ಸ್ವಾಮಿ ಅವರನ್ನು ಗಡಿಪಾರು ಮಾಡಬೇಕೆಂದು ಆಗ್ರಹಿಸಿರುವ ಸ್ವಾಭಿಮಾನಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು, ನಗರ ಹಾಗೂ ಕುಮಾರಪಟ್ಟಣಂದಲ್ಲಿ ಟೈರ್ಗೆ ಬೆಂಕಿ ಹಚ್ಚಿ, ತಹಸೀಲ್ದಾರ್ ಮಕಾಂದಾರ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ್ದಾರೆ. ವೇದಿಕೆ ರಾಜ್ಯಾಧ್ಯಕ್ಷ ನಿತ್ಯಾನಂದ ಕುಂದಾಪುರ ಮಾತನಾಡಿದರು. ತಾಲೂಕು ಅಧ್ಯಕ್ಷ ಚಂದ್ರು ಕಡ್ಲಿಗೊಂದಿ,ನಗರ ಘಟಕದ ಅಧ್ಯಕ್ಷ ದೇವರಾಜ ಕಲಾಲ, ಪ್ರಧಾನ ಕಾರ್ಯದರ್ಶಿ ಕೊಟ್ರೇಶ ಕುಂದಾಪುರ, ಸಂಘಟನಾ ಕಾರ್ಯದರ್ಶಿ ಪರಶುರಾಮ ಶೆಟ್ಟೇರ, ಮಾಲತೇಶ ನಾಯರ, ಮಂಜು ಬ್ಯಾಡಗಿ, ಪರಸಪ್ಪ ಮಲ್ಲಾಪುರ ಇದ್ದರು.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement