ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಸಿದ್ಧಾಂತ ಶಿಖಾಮಣಿ ಪಠಿಸಿ

Rashmi Kasaragodu
Updated On : 19 Jan 2014, 12:13 pm

ಸವಣೂರು: ಸಿದ್ಧಾಂತ ಶಿಖಾಮಣಿ ಗ್ರಂಥದ ಅಧ್ಯಯನದಿಂದ ಮನಸ್ಸಿಗೆ ಶಾಂತಿ, ನೆಮ್ಮದಿ ದೊರೆಯುತ್ತದೆ. ಮನುಷ್ಯನನ್ನು ಈ ಗ್ರಂಥ ಅಧ್ಯಾತ್ಮದೆಡೆಗೆ ಒಯ್ಯುತ್ತದೆ ಎಂದು ಕಾಶೀ ಪೀಠದ ಜಗದ್ಗುರು ಡಾ೤ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು. ತಾಲೂಕಿನ ಹುರುಳಿಕುಪ್ಪಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಧರ್ಮಸಭೆಯಲ್ಲಿ ಸಿದ್ಧಾಂತ ಶಿಖಾಮಣಿ ಗ್ರಂಥ ಬಿಡುಗಡೆ ಮಾಡಿ ಆಶೀರ್ವಚನ ನೀಡಿದರು. ಯಾವುದೇ ಧರ್ಮವನ್ನು ಅರ್ಥೈಸಿಕೊಳ್ಳಲು ಧರ್ಮ ಗ್ರಂಥದ ಅಧ್ಯಯನ ಅವಶ್ಯ. ಈ ಗ್ರಂಥವನ್ನು ಕನ್ನಡ, ಹಿಂದಿ, ತಮಿಳು, ತೆಲುಗು, ಮಲೆಯಾಳಂ, ನೇಪಾಳಿ ಭಾಷೆಗೂ ತರ್ಜುಮೆ ಮಾಡಲಾಗಿದೆ ಎಂದು ಹೇಳಿದರು. ದುರ್ಗಾದೇವಿ ದೇವಸ್ಥಾನದ ಬಳಿ ಕಾಶೀ ಜಂಗಮವಾಡಿ ಮಠದ ಜಗದ್ಗುರು ಡಾ೤ ಚಂದ್ರಶೇಖರ ಶಿವಾಚಾರ್ಯರನ್ನು ಹುರಳ್ಳಿಕುಪ್ಪಿ ಗ್ರಾಮದ ಹಿರಿಯರು ಬರಮಾಡಿಕೊಂಡರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement