ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಹಾವೇರಿ

ಕಾಂಗ್ರೆಸ್ ಸರ್ಕಾರದಿಂದ ಅಭಿವೃದ್ಧಿ ಶೂನ್ಯ: ಬಿ.ಎಸ್. ಯಡಿಯೂರಪ್ಪ

Mainashree
Updated On : 24 Jan 2014, 10:38 am

ರಾಣಿಬೆನ್ನೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅಭಿವೃದ್ಧಿ ಶೂನ್ಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟೀಕಿಸಿದರು. ಶ್ರೀ ಭೀಮಾಶಂಕರ ಸ್ವಾಮೀಜಿಯವರ ಅಡ್ಡಪಲ್ಲಕ್ಕಿ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದ ಅವರು ಸುದ್ದಿಗಾರರ ಜತೆಗೆ ಮಾತನಾಡಿ, ಕಾಂಗ್ರೆಸ್ ಚುನಾವಣೆ ವೇಳೆ ಮತದಾರರಿಗೆ ನೀಡಿದ ಯಾವುದೇ ಆಶ್ವಾಸನೆ ಈಡೇರಿಸಿಲ್ಲ. ಬಿಜೆಪಿ ಸರ್ಕಾರ ಅಧಿಕಾರದಲ್ಲಿದ್ದಾಗ ಜಾರಿ ಮಾಡಿದ ಯೋಜನೆಗಳನ್ನು ತಮ್ಮದೆಂದು ಹೇಳಿಕೊಳ್ಳುತ್ತಿರುವ ಕಾಂಗ್ರೆಸ್‌ಗೆ ಮತದಾರರೇ ಪಾಠ ಕಲಿಸುತ್ತಾರೆ ಎಂದರು.
ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲು ಬಿಜೆಪಿ ರಾಜ್ಯ ಹಾಗೂ ರಾಷ್ಟ್ರೀಯ ಮಂಡಳಿ ನಿರ್ಧರಿಸಿ, 70 ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಅಂತಿಮಗೊಳಿಸಿದೆ. ಉಳಿದ 30 ಅಭ್ಯರ್ಥಿಗಳ ಆಯ್ಕೆಗಾಗಿ ಬಿಜೆಪಿ ರಾಜ್ಯ ಸಮಿತಿ ಚಿಂತನೆ ನಡೆಸಿದೆ. ಶೀಘ್ರದಲ್ಲೇ ಲೋಕಸಭಾ ಚುನಾವಣೆ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು ಎಂದು ಯಡಿಯೂರಪ್ಪ ತಿಳಿಸಿದರು.
ಮಾಜಿ ಸಚಿವ ಸಿ.ಎಂ. ಉದಾಸಿ, ಮಾಜಿ ಶಾಸಕ ಜಿ. ಶಿವಣ್ಣ, ನಗರಸಭೆ ಮಾಜಿ ಅಧ್ಯಕ್ಷ ರಾಮಣ್ಣ ಕೋಲಕಾರ, ಎಸ್.ಎಸ್. ರಾಮಲಿಂಗಣ್ಣನವರ, ಶಿವನಗೌಡ ಮುದಿಗೌಡ್ರ, ರವಿ ಮಾಂಡ್ರೆ, ರಾಜು ಅಡ್ಮನಿ, ಶಿವಾನಂದ ಸಾಲಗೇರಿ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement