ಫೆ. 8ರಂದು ಜವಾಹರ ನವೋದಯ ಪ್ರವೇಶ ಪರೀಕ್ಷೆ
ಹಾವೇರಿ: ಹಾನಗಲ್ ತಾಲೂಕು ಮಹಾರಾಜಪೇಟೆ ಬಳಿ ಇರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2014-15ನೇ ಸಾಲಿಗೆ 6ನೇ ತರಗತಿ ಪ್ರವೇಶಕ್ಕಾಗಿ ಫೆ. 8ರಂದು ಬೆಳಗ್ಗೆ 11.30ರಿಂದ ಮಧ್ಯಾಹ್ನ 1.30ರ ವರೆಗೆ ಪ್ರವೇಶ ಪರೀಕ್ಷೆ ನಡೆಯಲಿದೆ. ಈಗಾಗಲೇ ಎಲ್ಲ ಪ್ರವೇಶ ಪತ್ರಗಳನ್ನು ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕಳುಹಿಸಲಾಗಿದ್ದು, ಎಲ್ಲ ಶಾಲೆಗಳ ಮುಖ್ಯೋಪಾಧ್ಯಾಯರು, ಪಾಲಕರು ಹಾಗೂ ಪೋಷಕರು ತಮ್ಮ ಮಕ್ಕಳ ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ನೋಡಿಕೊಳ್ಳಬೇಕು ಎಂದು ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.